ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಶುಭ ಧನುರ್ ಲಗ್ನದಲ್ಲಿ ನಂದಿ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಿದ್ದಾರೆ.
ಮೈಸೂರು ಅರಮನೆ ಬಲರಾಮ ದ್ವಾರದ ಬಳಿ ಈಡುಗಾಯಿ ಒಡೆದು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಮತ್ತಿತರರಿದ್ದರು.
ಈ ಸಂದರ್ಭದಲ್ಲಿ ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ , ಬೆಳೆಯಾಗಿದೆ. ಜಲಾಶಯಗಳು ತುಂಬಿ ಹರಿದಿದೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದಿದ್ದರಿಂದ ಬೆಳೆ ಹಾನಿಯಾಗಿದೆ. ಹಾನಿಯಾದ ಬೆಳೆಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದರು.