ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿವೆ. ದಸರಾಅದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಪಟ್ಟಿಯನ್ನು ಅರಣ್ಯ ಇಲಾಖೆ ಬಿಡುಗಡೆ ಮಾಡಿದೆ.
ಈ ಬಾರಿ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಒಟ್ಟು 14 ಆನೆಗಳ ಪೈಕಿ 9 ಆನೆಗಳ ಮೊದಲ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ನಿರೀಕ್ಷೆಯಂತೆ ಈ ಬಾರಿಯೂ ಆನೆ ಅಭಿಮನ್ಯು ಗಜಪಡೆಯ ಕ್ಯಾಪ್ಟನ್ ಆಗಿ ಚಿನ್ನದ ಅಂಬಾರಿ ಹೊರಲಿದೆ. ಆಗಸ್ಟ್ 4ರಂದು ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿವೆ.
ಕ್ಯಾಪ್ಟನ್ ಅಭಿಮನ್ಯು, ಭೀಮ, ಪ್ರಶಾಂತ, ಮಹೇಂದ್ರ, ಧನಂಜಯ, ಕಂಜನ್, ಏಕಲವ್ಯ, ಕಾವೇರಿ, ಲಕ್ಷ್ಮೀ ಆನೆಗಳು ಮೊದಲ ಪಟ್ಟಿಯಲ್ಲಿದ್ದಾರೆ.
ಆಗಸ್ಟ್ 4ರಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರನ ಹೊಸಳ್ಳಿ ನಾಗರಹೊಳೆ ಹೆಬ್ಬಾಗಿಲಿನಿಂದ ಗಜ ಪಯಣ ಆರಂಭವಾಗಲಿದೆ.