HomeKarnatakaಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೇ ಮರಕಡಿದ ಆರೋಪ: ಮೂವರ ವಿರುದ್ಧ FIR ದಾಖಲು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೇ ಮರಕಡಿದ ಆರೋಪ: ಮೂವರ ವಿರುದ್ಧ FIR ದಾಖಲು

ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ವಿಚಾರವಾಗಿ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ ಮತ್ತೊಂದು ವಿವಾದ ಆರಂಭವಾಗಿದೆ. ಕಂಬಳಕ್ಕೆಂದು ಗುರುತಿಸಿದ ಜಾಗದಲ್ಲಿ ಮರಗಳನ್ನು ಕಡಿದಿರುವ ಆರೋಪ ಕೇಳಿಬಂದಿದೆ.

ಕಂಬಳಕ್ಕಾಗಿ ಗುರುತಿಸಲಾದ ಸಾತಗಳ್ಳಿ ಪ್ರದೇಶದಲ್ಲಿ ಜಾಗ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಅನುಮತಿಯಿಲ್ಲದೆ ಮರಗಳನ್ನು ಕಡಿದ ಆರೋಪದ ಮೇಲೆ ಯುವಜನ ಸಬಲೀಕರಣ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ಮೂವರ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ.

20 ಜಾಲಿಮರಗಳು ಸೇರಿ ಒಟ್ಟು 25 ಮರಗಳನ್ನು ಕಡಿದಿರುವ ಆರೋಪ ಹಿನ್ನೆಲೆ ಅರಣ್ಯ ಕಾಯ್ದೆ 1963ರ ಸೆಕ್ಷನ್ 25, 33/2 ಮತ್ತು 33/3ರ ಅಡಿಯಲ್ಲಿ ಎಫ್​​ಐಆರ್​​ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮರಗಳನ್ನ ಕಡಿದಿರುವುದಕ್ಕೆ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಇರುವ ಮರಗಿಡಗಳನ್ನು ನಾಶಪಡಿಸಿ ಕಂಬಳ ಆಚರಣೆ ಮಾಡುವ ಅಗತ್ಯವೇನಿದೆ? ಎಂದು ಪ್ರಶ್ನಿಸಿದ್ದಾರೆ. ಮರಗಳನ್ನು ಕಡಿಯುವ ಬದಲು ಕಂಬಳವನ್ನು ಬೇರೆಡೆ ಆಯೋಜಿಸಬೇಕು ಅಥವಾ ಪರಿಸರಕ್ಕೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular