BIG NEWS: ಮೈಸೂರು ದಸರಾಗೆ ಮುನ್ನುಡಿ: ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ವೀರನಹೊಸಳ್ಳಿ ಬಳಿ ಅಭಿಮನ್ಯು ನೇತೃತ್ವದ 9 ಗಜಗಳ ಪಯಣಕ್ಕೆ ಇಂದು ಅಧಿಕೃತ ಚಾಲನೆ ನೀಡಲಾಯಿತು.

ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹೆಬ್ಬಾಗಿಲು ವೀರನಹೊಸಳ್ಳಿ ಬಳಿ ತುಲಾ ಲಗ್ನದಲ್ಲಿ ಗಜಪಡೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು.

ಅಭಿಮನ್ಯು ನೇತೃತ್ವದಲ್ಲಿ ಗಜಪಡೆಗಳಾದ ಮಹೇಂದ್ರ, ಅರ್ಜುನ, ವರಲಕ್ಷ್ಮೀ, ಧನಂಜಯ, ಗೋಪಿ, ವಿಜಯ, ಪಾರ್ಥಸಾರಥಿ, ರೋಹಿತ ಆನೆಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಪೂಜೆ ಸಲ್ಲಿಸಿದರು. ಬಳಿಕ ಗಜಪಡೆಗೆ ಚಾಲನೆ ನೀಡುವುದರೊಂದಿಗೆ ನಾಡಹಬ್ಬ ದಸರಾಗೆ ಮುನ್ನುಡಿ ಬರೆಯಲಾಯಿತು.

ಗಜಪಡೆಯ ಮುಂದೆ ಕಂಸಾಳೆ, ಡೊಳ್ಳು ಕುಣಿತ, ವೀರಗಾಸೆ, ಪೂಜಾ ಕುಣಿತ ಗೊರವರ ಕುಣಿತ, ಗುರುಪುರದ ಟಿಬೇಟಿಯನ್ ಶಾಲಾ ಮಕ್ಕಳ ನೃತ್ಯ, ಆದಿವಾಸಿ ಮಕ್ಕಳ ನೃತ್ಯ ಸೇರಿದಂತೆ ವಿವಿಧ ಕಲಾತಂಡ ವೈಭವದ ನೃತ್ಯ ಪ್ರದರ್ಶನ ನಡೆದಿದ್ದು ವಿಶೇಷವಾಗಿತ್ತು,

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read