ಪಂ. ಬಸವರಾಜ ಭಜಂತ್ರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಶಹನಾಯಿ ವಾದಕ ಪಂ. ಬಸವರಾಜ ಭಜಂತ್ರಿ ಅವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಂದು ಸಂಜೆ ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಂ. ಬಸವರಾಜ ಭಜಂತ್ರಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 5 ಲಕ್ಷ ರೂ., ಪ್ರಶಸ್ತಿ ಫಲಕ ಮತ್ತು ಸ್ಮರಣಿಕೆ ಒಳಗೊಂಡ ಪ್ರಶಸ್ತಿಯನ್ನು ಬಸವರಾಜ ಭಜಂತ್ರಿಯವರಿಗೆ ನೀಡಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read