HomeKarnatakaBIG NEWS: ಮೈಸೂರು ದಸರಾ ಜೊತೆಗೆ ಬೆಂಗಳೂರು ದಸರಾ ಹಬ್ಬಕ್ಕೂ ಭಾರಿ ಭದ್ರತೆ

BIG NEWS: ಮೈಸೂರು ದಸರಾ ಜೊತೆಗೆ ಬೆಂಗಳೂರು ದಸರಾ ಹಬ್ಬಕ್ಕೂ ಭಾರಿ ಭದ್ರತೆ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜೊತೆಗೆ ಬೆಂಗಳೂರು ದಸರಾ ಹಬ್ಬಕ್ಕೂ ಭದ್ರತೆ ಕಲ್ಪಿಸಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿರುವ ಅದ್ದೂರಿ ದಸರಾ ರಥಗಳ ಮೆರವಣಿಗೆಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಆರ್.ಟಿ.ನಗರದ ಮಠದಹಳ್ಳಿ ಮೈದಾನದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ 2000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಹೆಬ್ಬಾಳ, ಡಿ.ಜೆ.ಹಳ್ಳಿ ಸೇರಿದಂತೆ ಹಲವೆಡೆಯಿಂದ ದೇವರ ರಥಗಳು ಆಗಮಿಸಲಿವೆ. ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆಯಿದೆ. ಈ ನಿಟ್ಟಿನಲ್ಲಿ ಭದ್ರತೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ವಿಭಾಗದ ಡಿಸಿಪಿ ಸೈದುಲ್ಲಾ ಅದಾವ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ದಸರಾ ಹಬ್ಬದ ಭದ್ರತೆಗೆ 10ಕ್ಕೂ ಹೆಚ್ಚು ಕೆ ಎಸ್ ಆರ‍್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular