HomeKarnatakaBREAKING: ಮೈಸೂರು ದಸರಾ-2023: ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಅದ್ದೂರಿ ಚಾಲನೆ ನೀಡಿದ ನಾದಬ್ರಹ್ಮ ಹಂಸಲೇಖ

BREAKING: ಮೈಸೂರು ದಸರಾ-2023: ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಅದ್ದೂರಿ ಚಾಲನೆ ನೀಡಿದ ನಾದಬ್ರಹ್ಮ ಹಂಸಲೇಖ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟನೆ ಮಾಡಿದರು.

ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 10-15ರಿಂದ 10:30ರ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ ಹಂಸಲೇಖ ದೀಪ ಬೆಳಗುವ ಮೂಲಕ ಚಾಮುಂಡಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ-2023ಕ್ಕೆ ಚಾಲನೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕ ತನ್ವೀರ್ ಸೇಠ್ ಸೇರಿದಂತೆ ಗಣ್ಯಾತಿಗಣ್ಯರು ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಿದರು.

For Latest News Updates, Join Our Whatsapp Community🚩
RELATED ARTICLES

Most Popular