HomeKarnatakaBIG NEWS: ಮೈಸೂರು ದಸರಾ ಮಹೋತ್ಸವ: ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

BIG NEWS: ಮೈಸೂರು ದಸರಾ ಮಹೋತ್ಸವ: ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಂಜೆ 4:40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ.

ಜಂಬೂ ಸವಾರಿ ಮೆರವಣಿಗೆಗೂ ಮುನ್ನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದರು. ಮಧ್ಯಾಹ್ನ 1;46ರಿಂದ 2:48ರವರೆಗಿನ ಶುಭ ಮಕರ ಲಗ್ನದಲ್ಲಿ ನಂದಿದ್ವಜಕ್ಕೆ ಪೂಜೆ ನೆರವೇರಿಸಲಾಯಿತು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಜೆ 4:40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular