HomeKarnatakaBREAKING NEWS: ಡಿಸಿಪಿ ಕಾರಿನ ಮೇಲೆ ಕಲ್ಲು ತೂರಾಟ: ನಾಲ್ವರು ಅರೆಸ್ಟ್

BREAKING NEWS: ಡಿಸಿಪಿ ಕಾರಿನ ಮೇಲೆ ಕಲ್ಲು ತೂರಾಟ: ನಾಲ್ವರು ಅರೆಸ್ಟ್

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟದ ವೇಳೆಯೇ ಡಿಸಿಪಿ ಕಾರಿನ ಮೇಲೆಯೂ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದರು. ಇದೀಗ ಈ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಡಿಸಿಪಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಕಿಡಿಗೇಡಿಗಳು ದಾಂಧಲೆ ನಡೆಸಿದ್ದರು. ಕಿಡಿಗೇಡಿಗಳ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದೀಗ ಸಿಸಿಟಿವಿ ವಿಡಿಯೋ ಆಧಾರದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನು ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಈವರೆಗೆ 20 ಜನರನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular