HomeKarnatakaMysore Dasara : ಇಂದು ಮೈಸೂರು ದಸರಾ ಗೋಲ್ಡನ್​ ಕಾರ್ಡ್​ ಬಿಡುಗಡೆ, ಬೆಲೆ ಎಷ್ಟು ಇಲ್ಲಿದೆ...

Mysore Dasara : ಇಂದು ಮೈಸೂರು ದಸರಾ ಗೋಲ್ಡನ್​ ಕಾರ್ಡ್​ ಬಿಡುಗಡೆ, ಬೆಲೆ ಎಷ್ಟು ಇಲ್ಲಿದೆ ಮಾಹಿತಿ

ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮ ಮನೆ ಮಾಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿತ್ತ ದಾಂಗುಡಿ ಇಡುತ್ತಿದ್ದಾರೆ.

ಮೈಸೂರು ದಸರಾ ವೀಕ್ಷಿಸಲು ದೇಶ, ವಿದೇಶಗಳಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು ಆಗಮಿಸುತ್ತಾರೆ. ಇವರ ಅನುಕೂಲಕ್ಕಾಗಿ ಜಿಲ್ಲಾಡಳಿತ ಇಂದು (ಅ.18) ರಂದು ಬೆಳಗ್ಗೆ 10 ಗಂಟೆಗೆ ಗೋಲ್ಡ್ ಕಾರ್ಡ್ ಸೌಲಭ್ಯವನ್ನು ಬಿಡುಗಡೆ ಮಾಡಲಿದೆ.

ಗೋಲ್ಡ್ ಕಾರ್ಡ್ ಬೆಲೆ 6 ಸಾವಿರ ರೂ. ಗಳಾಗಿದೆ. ಗೋಲ್ಡ್ ಕಾರ್ಡ್ ಲಭ್ಯತೆಗೆ ಅನುಗುಣವಾಗಿ ಆನ್ಲೈನ್ ಮೂಲಕ ವೆಬ್ಸೈಟ್ನಲ್ಲಿ ಖರೀದಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಖರೀದಿಗಾಗಿ https://www.mysoredasara.gov.in/ ವೆಬ್ಸೈಟ್ ಸಂಪರ್ಕಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬನ್ನಿ ಮಂಟಪದಲ್ಲಿ ಪಂಜಿನ ಕವಾಯಿತು ವೀಕ್ಷಣೆಗೆ ಪ್ರತಿ ಟಿಕೆಟ್ ಬೆಲೆ 500 ರೂ. ನಿಗದಿಪಡಿಸಲಾಗಿದೆ. ಅರಮನೆ ಆವರಣದೊಳಗೆ ದಸರಾ ಜಂಬೂಸವಾರಿ ವೀಕ್ಷಣೆಗೆ ಪ್ರತಿ ಟಿಕೆಟ್ ಬೆಲೆ 3 ಸಾವಿರ ರೂ. ಮತ್ತು 2 ಸಾವಿರ ರೂ.,ಗಳನ್ನು ನಿಗದಿಪಡಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular