ಮೈಸೂರು: ಮೈಸೂರಿನಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ಬಾಲಕಿಯ ಶವ ಪತ್ತೆ ಪ್ರಕರಣಕ್ಕೆ ಆಘಾತಕಾರಿ ಮಾಹಿತಿ ಲಭ್ಯವಾಗಿದ್ದು, ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ ೫೦ಕ್ಕೂ ಹೆಚ್ಚು ಕುಟುಂಬಗಳು ಬಂದಿದ್ದವು. ಹೀಗೆ ಬಂದವರು ದಂಪತಿಯ ಮಗಳೊಬ್ಬಳು ಇಂದು ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಳು, 10 ವರ್ಷದ ಬಾಲಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಿದಾಗ ಸಮೀಪದಲ್ಲೇ ವಿರೂಪಗೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇಂದು ಕುಟುಂಬ ಬೇರೊಂದು ಸ್ಥಳಕ್ಕೆ ಹೋಗಲೆಂದು ಸಿದ್ಧತೆ ನಡೆಸುತ್ತಿದ್ದಾಗಲೇ ಮಗಳು ಶವವಾಗಿ ಪತ್ತೆಯಾಗಿದ್ದಾಳೆ.
ಬಾಲಕಿಯ ದೇಹ ವಿರೂಪಗೊಂಡಿರುವ ಸ್ಥಿತಿ ನೋಡಿದರೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಜರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಕ್ಯಾಮರಾ ಆಧಾರರಿ ಆರೋಪಿ ಪತ್ತೆ ಮಾಡಿದ್ದಾರೆ.
ರೆಡ್ ಶರ್ಟ್, ಜೀನ್ಸ್ ಧರಿಸಿರುವ ಕೊಲೆ ಆರೋಪಿಯ ಫೋಟೋ ಸಿಸಿಕ್ಯಾಮರಾದಲ್ಲಿ ಲಭ್ಯವಾಗಿದೆ. ಕೃತ್ಯದ ವೇಳೆ ಆರೋಪಿ ಕಾಲಿಗೂ ಚಪ್ಪಲಿ ಧರಿಸಿರಲಿಲ್ಲ. ಆರೋಪಿ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಎಂದು ಗುರುತಿಸಲಾಗಿದೆ.
ಈತ ಎರದು ವರ್ಷ ಜೈಲು ಶಿಕ್ಷೆ ಅನುಭವಿಸಿ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಹೊರಬಂದಿದ್ದ. ಊರಿಗೆ ಹೋಗದೇ ಎಂದರಲ್ಲಿ ಕುಡಿದು ಅಲೆದಾಡುತ್ತಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.