ಮೈಸೂರು: ಮೈಸೂರಿನಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಅರ್ಚಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಟಿ.ನರಸೀಪುರದಲ್ಲಿ ನಡೆದಿತ್ತು. ಇದೀಗ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.
44 ವರ್ಷದ ಅರುಣ್ ಮೃತರು. ಎಸ್ ಡಿಎ ಆಗಿ ಕೆಲಸ ಮಾಡುತ್ತಿದ್ದ ಅರುಣ್ ಇಂದು ಮೈಸೂರಿನಿಂದ ಬೆಂಗಳೂರಿಗೆ ಬಸ್ ನಲ್ಲಿ ಬರುತ್ತಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ. ಹೃದಯಾಘಾತದಿಂದ ಅರುಣ್ ಮೃತಪಟ್ಟಿದ್ದಾರೆ.
ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಕಿಲಾರೆ ಗ್ರಾಮದವರು ಎಂದು ತಿಳಿದುಬಂದಿದೆ.