ಮೈಸೂರು: ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ರಂಜಿತ್(32) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆ ನಿರ್ಮಾಣಕ್ಕಾಗಿ ಮೈಕ್ರೋ ಫೈನಾನ್ಸ್ ನಲ್ಲಿ 12 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸಾಲ ಮರುಪಾವತಿ ಹಿನ್ನೆಲೆ ವಿಳಂಬ ಹಿನ್ನೆಲೆ ಮನೆಗೆ ಬೀಗ ಹಾಕಿದ್ದ ಆರೋಪ ಕೇಳಿ ಬಂದಿದೆ.
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಎರಡು ಬಾರಿ ರಂಜಿತ್ ಮನೆಗೆ ಬೀಗ ಹಾಕಿದ್ದರು. ಇದುವರೆಗೆ ರಂಜಿತ್ 8 ಲಕ್ಷ ರೂಪಾಯಿ ಪಾವತಿಸಿದ್ದರು. ಇತ್ತೀಚೆಗೆ 3 ಲಕ್ಷ ರೂ. ಪಾವತಿಸಿದ್ದರು. ಆದರೂ ಕಿರುಕುಳ ಮುಂದುವರೆದ ಆರೋಪ ಕೇಳಿ ಬಂದಿದೆ.
ಮಳೆ ಕೊರತೆಯಿಂದ ಜಮೀನಿನ ಬೆಳೆ ಕೈಕೊಟ್ಟು ಆರ್ಥಿಕ ಸಂಕಷ್ಟ ಎದುರಾಗಿತ್ತು. ಮತ್ತೆ ಮನೆಗೆ ಬೀಗ ಹಾಕುತ್ತಾರೆ ಎನ್ನುವ ಆತಂಕದಲ್ಲಿದ್ದ ರಂಜಿತ್ ಗ್ರಾಮದಲ್ಲಿ ಅವಮಾನವಾಗುತ್ತದೆ ಎಂದು ಪತ್ನಿಯ ಬಳಿ ಹೇಳಿಕೊಳ್ಳುತ್ತಿದ್ದರು. ಪತಿ ಸಾವಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಕಾರಣ ನೊಂದು ಆತ್ಮಹತ್ಯೆ ಮಾಡಿಕೊಂಡ ರಂಜಿತ್ ಪತ್ನಿ ಭಾಗ್ಯ ಆರೋಪಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಹಕ್ಕುತ್ಯಾಗ: ಈ ಲೇಖನವು ಯಾವುದೇ ರೂಪದಲ್ಲಿ ಸ್ವಯಂ-ಹಾನಿ ಅಥವಾ ಆತ್ಮಹತ್ಯೆಯನ್ನು ಉತ್ತೇಜಿಸಲು, ಪ್ರೋತ್ಸಾಹಿಸಲು ಅಥವಾ ಸಂವೇದನಾಶೀಲಗೊಳಿಸಲು ಉದ್ದೇಶಿಸಿಲ್ಲ. ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಭಾವನಾತ್ಮಕ ಯಾತನೆ, ಆತ್ಮಹತ್ಯಾ ಆಲೋಚನೆಗಳು ಅಥವಾ ಮಾನಸಿಕ ಆರೋಗ್ಯ ಬಿಕ್ಕಟ್ಟನ್ನು ಅನುಭವಿಸುತ್ತಿದ್ದರೆ, ದಯವಿಟ್ಟು ತಕ್ಷಣದ ವೃತ್ತಿಪರ ಸಹಾಯವನ್ನು ಪಡೆಯಿರಿ. ಭಾರತದಲ್ಲಿ, ನೀವು AASRA (24/7) ಅನ್ನು ಸಂಪರ್ಕಿಸಬಹುದು: 91-9820466726 ಅಥವಾ ವಿಶ್ವಾಸಾರ್ಹ ಮಾನಸಿಕ ಆರೋಗ್ಯ ವೃತ್ತಿಪರರು, ವೈದ್ಯರು ಅಥವಾ ಸ್ಥಳೀಯ ತುರ್ತು ಸೇವೆಗಳನ್ನು ಸಂಪರ್ಕಿಸಬಹುದು.)

