HomeLatest NewsBREAKING NEWS: ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ದುರ್ಮರಣ!

BREAKING NEWS: ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ದುರ್ಮರಣ!

ಮೈಸೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಮೈಸೂರಿನ ನಾಗನೂರು ಬಳಿ ನಡೆದಿದೆ.

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 64 ವರ್ಷದ ಪ್ರಸನ್ನ ಮೃತ ದುರ್ದೈವಿ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನಿಕಟವರ್ತಿಯಾಗಿದ್ದರು ಎನ್ನಲಾಗಿದೆ.

ಮೃತದೇಹವನ್ನು ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ. ಮೈಸೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular