ಬೆಂಗಳೂರು: ಮೈಸೂರಿನ ಮುಡಾ ಸೈಟ್ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) 100 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಈ ಬಗ್ಗೆ ಇಡಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ 92 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಸೇರಿದಂತೆ ಇತರರಿಗೆ ಸೇರಿದ ನಿವೇಶನಗಳನ್ನು ಜಪ್ತಿ ಮಾಡಲಾಗಿದೆ.
ಒಟ್ಟಾರೆ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ 400 ಕೋಟಿ ಆಸ್ತಿ ಜಪ್ತಿ ಮಡಲಾಗಿದೆ. ಈ ಮೊದಲು ಇಡಿ 162 ಸೈಟ್ ಗಳನ್ನು ಜಪ್ತಿ ಮಾಡಿತ್ತು.