ಮೈಸೂರು: ಮಚ್ಚು, ಲಾಂಗುಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳಿಂದ ವ್ಯಕ್ತಿಯೋರ್ವರನ್ನು ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ನಡೆದಿದೆ.
ಹಳೇ ತಿರುಮಕೊಡಲಿನ ವಿನೋದ್ (32) ಕೊಲೆಯಾದ ವ್ಯಕ್ತಿ. ಹಳೆ ಧ್ವೇಷಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
