BREAKING: ಮೈಸೂರಿನಲ್ಲಿಯೂ ರಾಮೋತ್ಸವಕ್ಕೆ ಬ್ರೇಕ್; ಕೊನೇ ಕ್ಷಣದಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಣೆ

ಮೈಸೂರು: ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರಾಮಭಕ್ತರಿಂದ ರಾಮೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಮೆರವಣಿಗೆಗೆ ಬ್ರೇಕ್ ಹಾಕಲಾಗಿದೆ.

ಬೆಳಗಾವಿಯಲ್ಲಿ ಬೃಹತ್ ಶೋಭಾಯಾತ್ರೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನಿರಾಕರಿಸಿದ ಬೆನ್ನಲ್ಲೇ ಇದೀಗ ಮೈಸೂರಿನಲ್ಲಿಯೂ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿದೆ.

ಮೈಸೂರಿನಲ್ಲಿ ರಾಮೋತ್ಸವ ಅಂಗವಾಗಿ ಗಣಪತಿ ಸಚ್ಚಿದಾನಂದ ಆಶ್ರಮದ ವತಿಯಿಂದ ಕೆಸರೆಯಿಂದ ಆಶ್ರಮದವರೆಗೂ ಶ್ರೀರಾಮನ ಮೆರವಣಿಗೆ ಆಯೋಜಿಸಲಾಗಿತ್ತು. ಆರಂಭದಲ್ಲಿ ಇದಕ್ಕೆ ಪೊಲೀಸರು ಅನುಮತಿ ನೀಡಿದ್ದರು. ಆದರೆ ಈಗ ಕೊನೇ ಘಳಿಗೆಯಲ್ಲಿ ಅನುಮತಿ ನಿರಾಕರಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read