HomeKarnatakaತಮನ್ನಾ ಜೊತೆ ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತು, ನೆಟ್ಟಿಗರ ಟೀಕೆ

ತಮನ್ನಾ ಜೊತೆ ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತು, ನೆಟ್ಟಿಗರ ಟೀಕೆ

ಅಂತಿಮವಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಮೈಸೂರು ರೇಷ್ಮೆ ಸೀರೆ ಉಟ್ಟು ಮೈಸೂರು ಸ್ಯಾಂಡಲ್ ಸೋಪ್ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ತಮನ್ನಾ ಭಾಟಿಯಾ ರಾಯಭಾರಿಯಾಗಿರುವ ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತು ವಿವಿಧ ಪತ್ರಿಕೆಗಳಲ್ಲಿ ಮಂಗಳವಾರ ಪ್ರಕಟವಾಗಿದೆ.

ಮೈಸೂರು ಸ್ಯಾಂಡಲ್ ಸೋಪ್ ಪ್ರಚಾರಕ್ಕೆ ರಾಯಭಾರಿಯಾಗಿ ತಮನ್ನಾ ಭಾಟಿಯಾ ನೇಮಕ ವಿಚಾರವೇ ಬಹಳ ಚರ್ಚೆಗೆ ಕಾರಣವಾಗಿತ್ತು. ಆದರೆ ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಸರ್ಕಾರ ಅವರನ್ನೇ ಅಂತಿಮಗೊಳಿಸಿತ್ತು.

ಮಂಗಳವಾರ ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತು ನೋಡಿದ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಕರ್ನಾಟಕದ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಖಾತೆ ಸಚಿವ ಎಂ.ಬಿ.ಪಾಟೀಲ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು,  ‘ಶತಮಾನಕ್ಕೂ ಮೀರಿದ ಪರಂಪರೆ, ಭವಿಷ್ಯವನ್ನೇ ಗುರಿಯಾಗಿಟ್ಟ ದೃಢ ಸಂಕಲ್ಪ! ನಾಲ್ವಡಿ ಕೃಷ್ಣರಾಜ ಒಡೆಯರ್- ಸರ್ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ದೂರದೃಷ್ಟಿಯಿಂದ ಹುಟ್ಟಿದ ಕೆ.ಎಸ್.ಡಿ.ಎಲ್ ಇಂದು ಹೊಸ ಯುಗಕ್ಕೆ ಕಾಲಿಡುತ್ತಿದೆ’ ಎಂದು ಹೇಳಿದ್ದಾರೆ.

‘ಮೈಸೂರು ಸ್ಯಾಂಡಲ್ ಸೋಪ್ ಗೆ ನವೀನ ರೂಪ, ಉತ್ತರ ಭಾರತವನ್ನೂ ಮತ್ತಷ್ಟು ವ್ಯಾಪಕವಾಗಿ ತಲುಪುವ ಮಹತ್ವಾಕಾಂಕ್ಷೆಯೊಂದಿಗೆ ಖ್ಯಾತ ನಟಿ ತಮನ್ನಾ ಭಾಟಿಯಾ ಪ್ರಚಾರ ರಾಯಭಾರಿಯಾಗಿ ನೇಮಕ. ಡಿಜಿಟಲ್ ಮಾರುಕಟ್ಟೆ, ರಫ್ತು ವಿಸ್ತರಣೆ-ಎಲ್ಲವನ್ನೂ ಒಟ್ಟುಗೂಡಿಸಿ 2030ರ ಹೊತ್ತಿಗೆ ₹5,000 ಕೋಟಿ ವಹಿವಾಟಿನ ಗುರಿ. ಕರ್ನಾಟಕದ ಸರ್ಕಾರಿ ಸಂಸ್ಥೆ, ರಾಷ್ಟ್ರಮಟ್ಟದ ಬ್ರ್ಯಾಂಡ್ ಆಗುವ ದಿಟ್ಟ ಹೆಜ್ಜೆ’ ಎಂದು ತಿಳಿಸಿದ್ದಾರೆ.

ನಾಡದ್ರೋಹಿ ಕಾಂಗ್ರೆಸ್: ನಟಿ ತಮನ್ನಾ ಭಾಟಿಯಾ ಪ್ರಚಾರ ರಾಯಭಾರಿಯಾಗಿರುವ ಜಾಹೀರಾತಿಗೆ ಮಾಜಿ ಸಚಿವ, ಚಿಕ್ಕಬಳ್ಳಾಪುರ ಸಂಸದ ಡಾ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ‘ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಣ್ಣುತ್ತಿಲ್ಲವೇ?’ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

‘ಕರ್ನಾಟಕದ ಸುಪ್ರಸಿದ್ಧ ಅಂತಾರಾಷ್ಟ್ರೀಯ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ಗೆ ಬ್ರಾಂಡ್ ಅಂಬಾಸಿಡರ್ ನೇಮಿಸಲು ನಮ್ಮದೇ ಕನ್ನಡ ನಾಡಿನ ಅನೇಕ ತಾರೆಗಳು ಇದ್ದರೂ ಪರರಾಜ್ಯದ, ಅನ್ಯಭಾಷೆಯ ಸಿನಿಮಾ ನಟಿಯೊಬ್ಬರನ್ನು ಕೋಟ್ಯಂತರ ರೂಪಾಯಿ ಪೇಮೆಂಟ್ ಕೊಟ್ಟು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿರುವುದು ಕಾಂಗ್ರೆಸ್ ಪಕ್ಷದ ಕನ್ನಡ ವಿರೋಧಿ ಮನಸ್ಥಿತಿಗೆ ಮತ್ತೊಂದು ಸಾಕ್ಷಿ’ ಎಂದು ಆರೋಪಿಸಿದ್ದಾರೆ.

‘ಕನ್ನಡ ಸಿನಿ ತಾರೆಯರಾದ ರಮ್ಯಾ, ರಶ್ಮಿಕಾ ಮಂದಣ್ಣ, ಶ್ರೀನಿಧಿ ಶೆಟ್ಟಿ, ಪೂಜಾ ಹೆಗ್ಡೆ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕ ನಟಿಯರು ಇವತ್ತು ಅನೇಕ ಭಾಷೆಗಳ ಚಿತ್ರರಂಗದಲ್ಲಿ ಬೇಡಿಕೆಯುಳ್ಳ ಜನಪ್ರಿಯ ನಟಿಯರಾಗಿ ಕನ್ನಡದ ಕೀರ್ತಿ ಪತಾಕೆಯನ್ನ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ್ದಾರೆ’ ಎಂದು ಹೇಳಿದ್ದಾರೆ.

‘ನಮ್ಮದೇ ಕನ್ನಡ ನಾಡಿನ ನಟಿಯರನ್ನು ಬಿಟ್ಟು ಬೇರೆಯವರಿಗೆ ಮಣೆ ಹಾಕುವ ಕಾಂಗ್ರೆಸ್ ಪಕ್ಷದ ಧೋರಣೆ ಕನ್ನಡ ನಾಡಿನ ಪ್ರತಿಭೆಗಳಿಗೆ ಮಾಡಿರುವ ಅಮಪಾನ ಮಾತ್ರವಲ್ಲ, ಮೈಸೂರು ಸ್ಯಾಂಡಲ್ ಸೋಪಿನ ಅಸ್ಮಿತೆಗೂ ಮಾಡಿರುವ ಘೋರ ಅಪಮಾನ. ಈ ಕನ್ನಡ ವಿರೋಧಿ, ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ’ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular