HomeLatest NewsBREAKING: ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿಗೆ ಮುತ್ತಿಗೆ ಯತ್ನ: ಕನ್ನಡಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

BREAKING: ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿಗೆ ಮುತ್ತಿಗೆ ಯತ್ನ: ಕನ್ನಡಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ಗೆ ನಟಿ ತಮನ್ನಾ ಭಾಟಿಯಾರನ್ನು ಪ್ರಚಾರ ರಾಯಭಾರಿಯನ್ನಾಗಿ ಮಾಡಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ.

ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಬಳಿ ಕರವೇ ಹಾಗೂ ಕನ್ನಡಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕೆ.ಎಸ್.ಡಿ.ಎಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಟಿ ಕೋಟಿ ಹಣ ಕೊಟ್ಟು ಪರಭಾಷೆ ನಟಿಗೆ ರೆಡ್ ಕಾರ್ಪೆಟ್ ಹಾಕಲಾಗುತ್ತಿದೆ. ಕರ್ನಾಟಕದ ಹೆಮ್ಮೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯನ್ನಾಗಿ ಕನ್ನಡಿಗರನ್ನೇ ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಪ್ರತಿಭಟನಾಕಾರರು ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular