HomeLatest NewsBIG NEWS: ಗೌಡನಕಟ್ಟೆಯಲ್ಲಿ ನಾಲ್ಕು ಹುಲಿ ಮರಿಗಳ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

BIG NEWS: ಗೌಡನಕಟ್ಟೆಯಲ್ಲಿ ನಾಲ್ಕು ಹುಲಿ ಮರಿಗಳ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

ಮೈಸೂರು: ಮೈಸೂರಿನಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರೆದಿದೆ. ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನಾಲ್ಕು ಹುಲಿ ಮರಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದ್ದಾರೆ.

ಮೂರು ದಿನಗಳ ಹಿಂದೆ ತಾಯಿ ಹುಲಿಯನ್ನು ಸೆರೆ ಹಿಡಿದಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಇಂದು ನಾಲ್ಕು ಹುಲಿ ಮರಿಗಳನ್ನು ಸೆರೆ ಹಿಡಿದಿದ್ದಾರೆ. ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಹುಲಿ ಮರಿಗಳನ್ನು ಸೆರೆ ಹಿಡಿಯಲಾಗಿದೆ.

ನಾಲ್ಕು ಮರಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ದಿನಗಳ ಹಿಂದೆ ಜೋಳದ ಹೊಲದಲ್ಲಿ ರೈತರ ಮೇಲೆ ದಾಳಿ ನಡೆಸಲು ಯತ್ನಿಸಿದ್ದ ತಾಯಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ಈಗ ನಾಲ್ಕು ಮರಿಗಳನ್ನು ಸೆರೆ ಹಿಡಿದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular