HomeLatest NewsBIG NEWS: ಮೈಸೂರಿನಲ್ಲಿ ಸ್ಫೋಟ ಪ್ರಕರಣ: ವರದಿ ನೀಡಲು ಅಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ್ ಸೂಚನೆ

BIG NEWS: ಮೈಸೂರಿನಲ್ಲಿ ಸ್ಫೋಟ ಪ್ರಕರಣ: ವರದಿ ನೀಡಲು ಅಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ್ ಸೂಚನೆ

ಮೈಸೂರು: ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಬಲೂನು ಮಾರಾಟಗಾರ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಅರಮನೆ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಬಲೂನು ಮಾರುತ್ತಿದ್ದ ಲಕ್ನೋ ಮೂಲದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆತ ಬಲೂನು ಮಾರಿವವನಾಗಿದ್ದು, ಆತನ ಬಳಿ ಹೀಲಿಯಂ ಸಿಲಿಂಡರ್ ಹೇಗೆ ಬಂತು? ಎಲ್ಲಿ ಸಿಕ್ಕಿತು? ಎಂಬ ಬಗ್ಗೆ ಪರಿಶೀಲಿಸಬೇಕಿದೆ. ಸಣ್ಣಪುಟ್ಟ ವಸ್ತುಗಳನ್ನು ಮಾರಾಟ ಮಾಡುವವರ ಮೇಲೆ ಯಾವುದೇ ರೀತಿಯ ನಿಯಂತ್ರಣವಿಲ್ಲ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಹೆಚ್ಚಿನ ಕ್ರಮ ಕೈಗೊಳ್ಳಬೇಕು ಹಾಗೂ ಸೂಕ್ಷ್ಮ ರೀತಿಯಲ್ಲಿ ನೋಡಬೇಕು ಎಂದರು.

ಬಲೂನ್ ವ್ಯಾಪಾರಿಗೆ ಹೀಲಿಯಂ ಸಿಲಿಂಡರ್ ಹೇಗೆ ಸಿಕ್ಕಿದೆ? ಎಲ್ಲಿ ಖರ್ದಿ ಮಾಡಿದ? ಇದೆಲ್ಲವನ್ನೂ ತನಿಖೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular