HomeLatest Newsಡ್ರಗ್ಸ್ ವಿರುದ್ಧ ಮೈಸೂರು ಸಿಸಿಬಿ ಬೃಹತ್ ಕಾರ್ಯಾಚರಣೆ: ಮತ್ತೆ ಐವರು ಆರೋಪಿಗಳು ಅರೆಸ್ಟ್

ಡ್ರಗ್ಸ್ ವಿರುದ್ಧ ಮೈಸೂರು ಸಿಸಿಬಿ ಬೃಹತ್ ಕಾರ್ಯಾಚರಣೆ: ಮತ್ತೆ ಐವರು ಆರೋಪಿಗಳು ಅರೆಸ್ಟ್

ಮೈಸೂರು: ಮೈಸೂರು ಸಿಸಿಬಿ ಪೊಲೀಸರು ಮತ್ತಷ್ಟು ಡ್ರಗ್ಸ್ ಜಾಲವನ್ನು ಬೇಧಿಸಿದ್ದಾರೆ. ಮೈಸೂರು ನಗರದಲ್ಲಿ ಸಿಸಿಬಿ ಮತ್ತು ಮಂಡಿ ಪೊಲೀಸರು ಮಾದಕ ವಸ್ತುಗಳ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ.

ಮಾದಕವಸ್ತು ಮುಕ್ತ ಮೈಸೂರಿಗಾಗಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಮೊದಲ ಪ್ರಕರಣದಲ್ಲಿ ಮೊಹಮ್ಮದ್ ಕರೀಂ ಮತ್ತು ನಿಷಾದ್ ಪಾಷಾ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕರೀಂ ಮೇಲೆ ಈಗಾಗಲೇ 5 ಎನ್‌ಡಿಪಿಎಸ್ ಪ್ರಕರಣಗಳು ಹಾಗೂ ನಿಷಾದ್ ಪಾಷಾ ಮೇಲೆ 5 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇವರಿಂದ 3.14 ಗ್ರಾಂ ಎಂಡಿಎಂಎ ಸಿಂಥೆಟಿಕ್ ಡ್ರಗ್ಸ್​​​ಗಳನ್ನು ವಶಪಡಿಸಿಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಎರಡನೇ ಪ್ರಕರಣದಲ್ಲಿ ಸಂಜಯ್ ಮತ್ತು ರಾಜ್‌ಕುಮಾರ್ ಎಂಬುವವನ್ನು ಬಂಧಿಸಲಾಗಿದೆ. ಇವರಿಂದ ಒಟ್ಟು 585 ಗ್ರಾಂ ಗಾಂಜಾ ವಶ ಮಾಡಲಾಗಿದೆ. ಇದರ ಜತೆಗೆ ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ಟಿವಿಎಸ್ ಬೈಕ್ ವಶಕ್ಕೆ ಪಡೆಯಲಾಗಿದೆ.

ಮೂರನೇ ಪ್ರಕರಣದಲ್ಲಿ ಮೊಹಮ್ಮದ್ ಅಫಾಕ್ ಎಂಬುವವನ್ನು ಬಂಧಿಸಲಾಗಿದೆ. ಈತ ರಾಜೀವ್ ನಗರದ ನಿವಾಸಿಯಾಗಿದ್ದು, ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಮೈಸೂರು ಪೊಲೀಸರು ಡ್ರಗ್ಸ್ ನಿಯಂತ್ರಿಸಲು ‘ವಿಮುಕ್ತಿ’ ಹೆಸರಿನಲ್ಲಿ ವಿಶೇಷ ಸಹಾಯವಾಣಿಯನ್ನು (8277948080) ಆರಂಭಿಸಿದ್ದಾರೆ. ನಿಮ್ಮ ಸುತ್ತಮುತ್ತ ಡ್ರಗ್ಸ್ ಮಾರಾಟ, ಸೇವನೆ ಅಥವಾ ಸಾಗಾಟದ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಲು ಪೊಲೀಸರು ಸೂಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular