ಮೈಸೂರು: ರಾಜ್ಯದಲ್ಲಿ ಬಾಂಬ್ ಬೆದರಿಕೆ ಕರೆಗಳು ಮುಂದುವರೆದಿದೆ. ಶಾಲೆಗಳು, ಹೋಟೆಲ್, ವಿಮಾನ ನಿಲ್ದಾಣಗಳ ಬಳಿಕ ಇದೀಗ ಕೋರ್ಟ್ ಗಳಿಗೂ ಬಾಂಬ್ ಬೆದರಿಕೆ ಹಾಕಲಾಗುತ್ತಿದೆ. ಮೈಸೂರಿನ ಹಳೇ ಕೋರ್ಟ್ ಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಮೈಸೂರಿನ ಹಳೆ ಕೋರ್ಟ್ ಗೆ ಇ-ಮೇಲ್ ಸಂದೇಶದ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಕೋರ್ಟ್ ನಲ್ಲಿ ಬಾಂಬ್ ಇಡಲಾಗಿದೆ ಎಂದು ಸಂದೇಶ ಬಂದಿದೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ನ್ಯಾಯಾಧೀಶರು, ವಕೀಲರು, ಕಕ್ಷಿದಾರರು ಕೋರ್ಟ್ ನಿಂದ ಹೊರ ಬಂದಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿರುವ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿವೆ.
ಕೋರ್ಟ್ ಆವರಣ, ಕೋರ್ಟ್ ಒಳಗಡೆಗೆ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

