BIG NEWS: ಬೆಳೆ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ

ಮೈಸೂರು: ಬೆಳೆ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುಂದೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.

35 ವರ್ಷದ ಸಿದ್ದರಾಜ ನಾಯ್ಕ್ ಎಂಬುವವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ಗಂಭೀರವಾಗಿದೆ. ಗಾಯಾಳು ರೈತನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದರಾಮಜ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಎರಡು ದಿನಗಳ ಹಿಂದೆ ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ಕೊಡಲು ಮುಂದಾಗಿದ್ದ ಅರಣ್ಯ ಸಿಬ್ಬಂದಿ ಮೇಲೆಯೇ ಕಾಡಾನೆ ದಾಳಿ ನಡೆಸಿತ್ತು, ಗಂಭೀರವಾಗಿ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಕೆಲವೇ ಹೊತ್ತಲ್ಲಿ ಕೊನೆಯುಸಿರೆಳೆದಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ರೈತನ ಮೇಲೆ ಕಾಡಾನೆ ದಾಳಿ ನಡೆಸಿದೆ.

ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿದ್ದು, ಗ್ರಾಮಶರು ಜೀವ ಭಯದಲ್ಲಿ ಬದುಕುವಂತಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read