HomeKarnatakaBIG NEWS: ಬಹಿರ್ದೆಸೆಗೆ ಹೋಗಿದ್ದಾತನ ಮೇಲೆ ಆನೆ ದಾಳಿ; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

BIG NEWS: ಬಹಿರ್ದೆಸೆಗೆ ಹೋಗಿದ್ದಾತನ ಮೇಲೆ ಆನೆ ದಾಳಿ; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ ನಡೆದಿದೆ.

ವಸಂತ್ (36) ಆನೆ ದಾಳಿಗೆ ಸಾವನ್ನಪ್ಪಿದವರು. ವಸಂತ್ ಬಹಿರ್ದೆಸೆಗೆಂದು ಹೋಗಿದ್ದರು. ಈ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿ ತುಳಿದುಹಾಕಿದೆ. ವಸಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೈಸೂರು ಜಿಲ್ಲೆಯ ಹಲವೆಡೆಗಳಲ್ಲಿ ಆನೆ ಹಾಗೂ ಮಾನವ ಸಂಘರ್ಷ ಮುಂದುವರೆದಿದ್ದು, ಗ್ರಾಮಸ್ಥರು ಆತಂಕದಲ್ಲಿ ಬದುಕುವಂತಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular