HomeLatest NewsBIG NEWS: ಭೀಕರ ಅಗ್ನಿ ಅವಘಡ: ನಾಲ್ಕು ಗೋದಾಮುಗಳು ಬೆಂಕಿಗಾಹುತಿ

BIG NEWS: ಭೀಕರ ಅಗ್ನಿ ಅವಘಡ: ನಾಲ್ಕು ಗೋದಾಮುಗಳು ಬೆಂಕಿಗಾಹುತಿ

ಮೈಸೂರು: ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಗೋದಾಮುಗಳು  ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ನಗರದ ಹೊರವಲಯದ ಕೆಸರೆ ಬಡಾವಣೆಯಲ್ಲಿರೋ ಗೋದಾಮುಗಳು ಬೆಂಕಿಗಾಹುತಿಯಾಗಿವೆ. ಗೋಡೌನ್ ನಲ್ಲಿ ಹಳೆಯ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದ್ದು . ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಇಡೀ ಗೋದಾಮಿಗೆ ಬೆಂಕಿ ವ್ಯಾಪಿಸಿದೆ.

ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತಲೂ ಹರಡಿದ್ದು, ಅಕ್ಕಪಕ್ಕದಲ್ಲಿದ್ದ ಇತರ ಗೋಡೌನ್ ಗೂ ಹಬ್ಬಿದೆ. ಮುಗಿಲೆತ್ತರದವರೆಗೆ ಗೋದಾಮು ಹೊತ್ತಿ ಉರಿದಿದ್ದು ದಟ್ಟ ಹೊಗೆ ಆವರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಬೆಂಕಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿದೆ ಎಂದು ಮಾಲೀಕರು ಹೇಳಿದ್ದಾರೆ. ಕುಡಿದ ಮತ್ತಿನಲ್ಲಿ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಮೈಸೂರಿನ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular