ಮೈಸೂರು: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ 6 ಜನರು ಜಲಸಮಾಧಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ.
ಉರೂಸ್ ಹಿನ್ನೆಲೆಯಲ್ಲಿ ದರ್ಗಾಕ್ಕೆ ಬಂದಿದ್ದ ಕುಟುಂಬದವ 8 ಜನರು ಬಿಸಿಲ ಧಗೆಯಿಂದಾಗಿ ನದಿಯಲ್ಲಿ ಈಜಲು ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ನೀರಿನರ ರಭಸಕ್ಕೆ ಸಿಲುಕಿ ಆರು ಜನರು ನಿರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದದಾರೆ. ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಯಾಸಿನ್ (23), ಫಾತಿಮ್ (30), ನೇಹಾನ್(19), ಅಲೀಂ (13), ಹುಮಾಯೂನ್ (7), ವರ್ಷ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಕೆ.ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

