HomeKarnatakaBIG NEWS: ಅರಣ್ಯ ಇಲಾಖೆ ಬೋನಿಗೆ ಬಿದ್ದ ಮತ್ತೊಂದು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

BIG NEWS: ಅರಣ್ಯ ಇಲಾಖೆ ಬೋನಿಗೆ ಬಿದ್ದ ಮತ್ತೊಂದು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು: ಮೈಸೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಚಿರತೆ, ಹುಲಿ ದಾಳಿಗಳು ಹೆಚ್ಚುತ್ತಿದ್ದು, ಗ್ರಾಮಸ್ಥರು ಜೀವ ಭಯದಲ್ಲಿ ಕಾಲ ಕಳೆಯುವಂತಾಗಿದೆ. ಇದೀಗ ಕೀರಾಳು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಬಿದ್ದಿರುವ ಘಟನೆ ನಡೆದಿದೆ.

ಹಲವು ದಿನಗಳಿಂದ ಗ್ರಾಮದ ಸುತ್ತ ಕಾಣಿಸಿಕೊಂಡಿದ್ದ ಚಿರತೆ, ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಒತ್ತಾಯಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಕೊನೆಗೂ ಚಿರತೆ ಬಿದ್ದಿದೆ. ಚಿರತೆ ಸೆರೆ ಹಿಡಿದಿರುವ ಹಿನ್ನೆಲೆಯಲ್ಲಿ ಕೀರಾಳು ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular