BIG NEWS: ಚಿರತೆ ಬಳಿಕ ಹುಲಿ ದಾಳಿಗೂ ಆರಂಭವಾಗಲಿದೆ ಕೂಂಬಿಂಗ್ ಆಪರೇಷನ್; ಶಾಸಕ ದರ್ಶನ್ ಧ್ರುವನಾರಾಯಣ್ ಮಾಹಿತಿ

ಮೈಸೂರು: ಮೈಸೂರಿನ ನಂಜನಗೂಡಿನಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ಶಾಸಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಶೀಘ್ರದಲ್ಲಿಯೇ ಹುಲಿ ಕಾರ್ಯಾಚಾರಣೆ ನಡೆಸಲು ಮುಂದಾಗಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ದರ್ಶನ್ ಧ್ರುವನಾರಾಯಣ್, ನಂಜನಗೂಡು ತಾಲೂಕಿನ ಮಹದೇವರನಗರ ಗ್ರಾಮದಲ್ಲಿ ರೈತನ ಮೇಲೆ ಹುಲಿ ದಾಳಿ ನಡೆದಿತ್ತು. ರೈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಲಿ ಸೆರೆಗೆ ಶೀಘ್ರದಲ್ಲಿಯೇ ಕೂಂಬಿಂಗ್ ಆಪರೇಷನ್ ನಡೆಸಲಾಗುವುದು ಎಂದರು.

ಹುಲಿ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ರೈತ ವೀರಭದ್ರ ಬೋವಿ ಅವರ ಖರ್ಚು ವೆಚ್ಚಗಳನ್ನು ಸರ್ಕಾರ ಹಾಗೂ ಅರಣ್ಯ ಇಲಾಖೆ ಭರಿಸಲಿದೆ. ನಾನೂ ಕೂಡ ವೈಯಕ್ತಿಕವಾಗಿ ಪರಿಹಾರ ನೀಡಿ ಆತ್ಮಸ್ಥೈರ್ಯ ತುಂಬಿದ್ದೇನೆ. ಕಳೆದ ವರ್ಷ ಹಾದನೂರು, ಒಡೆಯನಪುರ ಗ್ರಾಮದ ದನದಾಹಿಯನ್ನು ಹುಲಿ ಬಲಿಪಡೆದುಕೊಂಡಿತ್ತು. ಈ ಬಾರಿ ಹುಲಿ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತದೆ. ಹುಲಿ ಸೆರೆ ಹಿಡಿಯಲು ಆನೆಗಳನ್ನು ಬಳಸಿಕೊಳ್ಳಲಾಗುವುದು. ಕಾಡಂಚಿನ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read