ಮೈಸೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಆರು ಜನರನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ದಾಸಲಕೊಪ್ಪಲು ಗ್ರಾಮದ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಇಬ್ಬರು ಮಹಿಳೆಯರು ಸೇರಿ 6 ಜನರು ಸಿಕ್ಕಿ ಬಿದ್ದಿದ್ದಾರೆ.
ಪ್ರಮುಖ ಆರೋಪಿ ಮಂಜುನಾಥ್ ಎಂಬಾತ ಇಬ್ಬರು ಹೆಣ್ಣುಮಕ್ಕಳನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಇಬ್ಬರು ಯುವತಿಯರನ್ನು ರಕ್ಷಿಸಲಾಗಿದ್ದು, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಿಂಗಳಿಗೊಮ್ಮೆ ಮನೆ ಬದಲಿಸುತ್ತಿದ್ದರು. ಬೇರೆ ಬೇರೆ ಕಡೆಗಳಿಂದ ಯುವತಿಯರನ್ನು ಕರೆತಂದು ಧಂಧೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.