HomeKarnatakaBREAKING: ಪಬ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ: ಇಬ್ಬರು ಸಜೀವಹದಹನ

BREAKING: ಪಬ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ: ಇಬ್ಬರು ಸಜೀವಹದಹನ

ಮೈಸೂರು: ಪಬ್ ವೊಂದರಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವದಹನವಾಗಿರುವ ಘಟನೆ ಮೈಸೂರಿನ ರಿಂಗ್ ರಸ್ತೆಯಲ್ಲಿ ನಡೆದಿದೆ.

ಮೈಸೂರಿನ ರಿಂಗ್ ರಸ್ತೆಯಲ್ಲಿನ ದಟ್ಟಗಳ್ಳಿಯಲ್ಲಿನ 4ನೇ ಹಂತದಲ್ಲಿರುವ ಪಬ್ ವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘದ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಇಬ್ಬರು ಸಜೀವದಹನವಾಗಿದ್ದಾರೆ. ಘಟನೆಯಲ್ಲಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಹಿಲ್ ಹಾಗೂ ಪ್ರಕಾಶ್ ಮೃತ ದುರ್ದೈವಿಗಳು. ಇವರಿಬ್ಬರೂ ಪಬ್ ನ ಉದ್ಯೋಗಿಗಳು ಎಂದು ತಿಳಿದುಬಂದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪಬ್ ನಿಂದ ಹೊರಬರಲಾಗದೇ ಇಬ್ಬರೂ ಸುಟ್ಟು ಕರಕಲಾಗಿದ್ದಾರೆ.

ಬೆಂಕಿ ಅವಘಡದಿಂದಾಗಿ ಇಡೀ ಪಬ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular