HomeKarnatakaBIG NEWS: ಸಿಎಂ ನಿವಾಸಕ್ಕೆ ರೈತರಿಂದ ಮುತ್ತಿಗೆ ಯತ್ನ; ಕುರುಬೂರು ಶಾಂತಕುಮಾರ್ ಸೇರಿ ಹಲವರು ಪೊಲೀಸ್...

BIG NEWS: ಸಿಎಂ ನಿವಾಸಕ್ಕೆ ರೈತರಿಂದ ಮುತ್ತಿಗೆ ಯತ್ನ; ಕುರುಬೂರು ಶಾಂತಕುಮಾರ್ ಸೇರಿ ಹಲವರು ಪೊಲೀಸ್ ವಶಕ್ಕೆ

ಮೈಸೂರು: ರೈತ ಸಂಘಟನೆಗಳ ಪ್ರತಿಭಟನೆ ಮೈಸೂರಿನಲ್ಲಿ ತೀವ್ರಗೊಂಡಿದ್ದು, ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರೈತರು ಹಸಿರು ಶಾಲು ಹಿಡಿದು ಮೈಸೂರಿನ ಟಿ.ಕೆ.ಬಡಾವಣೆಯಲ್ಲಿನ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದ್ದು, ಸರ್ಕಾರದ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 50ಕ್ಕೂ ಹೆಚ್ಚು ರೈತ ಮುಖಂಡರು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗುತ್ತಿದ್ದಂತೆ ಕುರುಬೂರು ಶಾಂತಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಲವು ರೈತ ಮುಖಂಡರು ಹಾಗೂ ರೈತ ಮಹಿಳೆಯರು ರಸ್ತೆಯಲ್ಲಿಯೇ ಮಲಗಿ ಪೊಲೀಸರ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.

 

For Latest News Updates, Join Our Whatsapp Community🚩
RELATED ARTICLES

Most Popular