HomeLatest NewsBREAKING: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕು ಇರಿದ ಪ್ರೇಮಿ: ಜೀವನ್ಮರಣದ ನಡುವೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೇ ಯುವತಿ...

BREAKING: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕು ಇರಿದ ಪ್ರೇಮಿ: ಜೀವನ್ಮರಣದ ನಡುವೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವು!

ಮೈಸೂರು: ಪಾಗಲ್ ಪ್ರೇಮಿಯೊಬ್ಬ, ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿ ಸಾವನ್ನಪ್ಪಿದ್ದಾಳೆ.

ಪೂರ್ಣಿಮಾ ಮೃತ ಯುವತಿ. ಚಾಕು ಇರಿತದಿಂದ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಪೂರ್ಣಿಮಾ ಅವರನ್ನು ಮೈಸೂರಿನ ಜೆ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭಿಷೇಕ್ ಎಂಬ ಯುವಕ, ಪಾಂಡವಪುರದ ಎಲೆಗೆರೆ ಗ್ರಾಮದ ಯುವತಿ ಪೂರ್ಣಿಮಾಳನ್ನು ಪ್ರೀತಿಸಿದ್ದ. ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮ ವೈಫಲ್ಯದಿಂದ ನಿನ್ನೆ ಸಂಜೆ ಯುವತಿಗೆ ಚಾಕು ಇರಿದಿದ್ದ. ಗಾಯಾಳು ಯುವತಿ ಸಾವು-ಬದುಕಿನ ನಡುವೆ ಹೋರಾಡಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮೈಸೂರಿನ ಲಕ್ಷ್ಮೀಪುರ ಠಾಣೆ ಪೊಲೀಸರು ಆರೋಪಿ ಅಭಿಷೇಕ್ ನನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular