ಬೀದರ್ : ಬೀದರ್ ನಲ್ಲಿ ಅನುಮಾನಾಸ್ಪದ ಸ್ಪೋಟ ಸಂಭವಿಸಿದ್ದು, ಪರಿಣಾಮ 6 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಹೌದು, ಬೀದರ್ ನಲ್ಲಿ ನಿಗೂಢ ವಸ್ತುವೊಂದು ಸ್ಪೋಟಗೊಂಡಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಸ್ಪೋಟದ ಪರಿಣಾಮ ಶಾಲೆಗೆ ತೆರಳುತ್ತಿದ್ದ 6 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿದೆ. ಮೋಳಗಿ ಮಾರಯ್ಯ ದೇಗುಲಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಘಟನೆ ನಡೆದ ಸ್ಥಳಕ್ಕೆ ಹುಮ್ನಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಫೋಟಗೊಂಡ ವಸ್ತು ಯಾವುದು? ಅದು ಹಳೆಯ ಸ್ಫೋಟಕವೇ ಅಥವಾ ಕಲ್ಲುಗಣಿಗಾರಿಕೆಗೆ ಬಳಸುವ ಜಿಲೆಟಿನ್ ಕಡ್ಡಿಗಳೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.ಕಳೆದ 6 ತಿಂಗಳಿನಲ್ಲಿ 2 ಬಾರಿ ಸ್ಪೋಟ ಸಂಭವಿಸಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಸ್ಪೋಟ ಸಂಭವಿಸಿದರೆ ಸಾರ್ವಜನಿಕರು ಏನು ಮಾಡಬೇಕು : ಇಂತಹ ಅನುಮಾನಾಸ್ಪದ ಸ್ಪೋಟ ಸಂಭವಿಸಿದರೆ ಅನುಮಾನಾಸ್ಪದ ವಸ್ತುಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು ಮತ್ತು ಸ್ಫೋಟದ ಸ್ಥಳಕ್ಕೆ ಹೋಗಬಾರದು .

