HomeKarnatakaಬ್ಯೂಟಿ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ...?

ಬ್ಯೂಟಿ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಮೈಸೂರು: ಮೈಸೂರಿನ ಬ್ಯೂಟಿ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕೃಷ್ಣರಾಜ ಪೊಲೀಸರು ದಾಳಿ ನಡೆಸಿದ್ದು, 5 ಯುವತಿಯರನ್ನು ರಕ್ಷಿಸಿದ್ದಾರೆ.

ಬ್ಯೂಟಿ ಪಾರ್ಲರ್ ಗಳಲ್ಲಿ ಆನ್ಲೈತಿಕ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಒಡನಾಡಿ ಸಂಸ್ಥೆಗೆ ಮಾಹಿತಿ ಬಂದಿದ್ದು, ಸಂಸ್ಥೆಯಿಂದ ಈ ಬಗ್ಗೆ ಸಂದೇಶ ಮತ್ತು ವಿಡಿಯೋ ದಾಖಲೆಗಳನ್ನು ಸಂಗ್ರಹಿಸಿ ಕೃಷ್ಣರಾಜ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿದ್ದು, ಸ್ಥಳದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಪುರಾವೆಗಳು ದೊರೆತಿವೆ. ಐವರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ರಾಹುಲ್ ವಿಜಯ್, ದೀಪು, ಸ್ವಾಮಿ, ಗುರುಪ್ರಸಾದ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular