HomeKarnatakaಭ್ರಷ್ಟಾಚಾರ ಆರೋಪ: ಪಿಡಿಒ ಅಮಾನತು

ಭ್ರಷ್ಟಾಚಾರ ಆರೋಪ: ಪಿಡಿಒ ಅಮಾನತು

ಮೈಸೂರು: ಕೆಆರ್ ನಗರ ಸಾಲಿಗ್ರಾಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ತಿಲಕ್ ರಾಜ್ ಅವರನ್ನು ಭ್ರಷ್ಟಾಚಾರ ಆರೋಪದ ಮೇಲೆ ಅಮಾನತು ಮಾಡಲಾಗಿದೆ.

ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ದಿಶಾ ಸಮಿತಿ ಸಭೆಯಲ್ಲಿ ನಿರ್ದೇಶಕರಾದ ಹಂಪಾಪುರ ಕುಮಾರ್ ಅವರು 15ನೇ ಹಣಕಾಸು ಯೋಜನೆ ಅಡಿ ಸಾಲಿಗ್ರಾಮ ಗ್ರಾಮ ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಅಂಗವಿಕಲರ ಕಾಮಗಾರಿಗಳ ಕೆಲಸ ಸಮರ್ಪಕವಾಗಿ ನಿರ್ವಹಿಸದೆ ಎಲೆಕ್ಟ್ರಿಕಲ್ ಸಾಮಗ್ರಿ ಖರೀದಿಯಲ್ಲಿ ವ್ಯವಹಾರ ನಡೆದಿದೆ ಎಂದು ದಾಖಲೆ ಸಹಿತ ದೂರು ನೀಡಿದ್ದರು.

ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಹೆಚ್.ಡಿ. ಕುಮಾರಸ್ವಾಮಿ ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್ ಅವರಿಗೆ ಸೂಚಿಸಿದ್ದರು. ತನಿಖೆಯ ವೇಳೆ ತಿಲಕ್ ರಾಜ್ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಜಿಪಂ ಸಿಇಒ ಅಮಾನತುಗೊಳಿಸಿ ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ

ಬೆಂಗಳೂರು: ವಿಶ್ವ ಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ (ನಿ) ವತಿಯಿಂದ  2026-27 ನೇ ಸಾಲಿನಲ್ಲಿ ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು –ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ) . ಗಂಗಾಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್  ಅಟಲ್ –ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು  ಸೆ.30 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: https://kvcdcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ: 080-23156006 ಅಥವಾ ಜಿಲ್ಲಾ ವ್ಯವಸ್ಥಾಪಕರು,ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ  ದಕ್ಷಿಣ ಜಿಲ್ಲೆಯ ಕರ್ನಾಟಕ ವಿಶ್ವ ಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿ. ವತಿಯಿಂದ 2026-27 ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ(Fresh Students), ಅರಿವು ಶೈಕ್ಷಣಿಕ ಸಾಲ ಯೋಜನೆ(Renewals), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು(Fresh Students),  ಸ್ವಯಂ ಉದ್ಯೋಗ  ಸಾಲ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಪ್ರವರ್ಗ-1 ರಲ್ಲಿ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ  ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್  ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಸೆ.30 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: https://ambigaradevelopment.karnataka.gov.in ಅಥವಾ ದೂರವಾಣಿ ಸಂಖ್ಯೆ 080-23156006 ಶ ಅಥವಾ ಬೆಂಗಳೂರು ದಕ್ಷಿಣ  ಜಿಲ್ಲೆಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular