Mysuru Dasara 2023: ಬರದ ನಡುವೆ ಇಂದು ಐತಿಹಾಸಿಕ ನಾಡಹಬ್ಬ `ಮೈಸೂರು ದಸರಾ’ಗೆ ಹಂಸಲೇಖ ಚಾಲನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅಕ್ಟೋಬರ್ 15 ರ ಇಂದು ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಬೆಳಗ್ಗೆ 10.15 ರಿಂದ 10.35ರ ವೃಶ್ಚಿಕ ಲಗ್ನದಲ್ಲಿ ಹಂಸಲೇಖ  ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಾಡ ದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.

ಇಂದು ಬೆಳಗ್ಗೆ 10.15 ರಿಂದ 10.36 ರೊಳಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ 10 ದಿನಗಳ ಉತ್ಸವಕ್ಕೆ ಹಂಸಲೇಖ ಉದ್ಘಾಟಿಸಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಮೊದಲ ದಿನವಾದ ಇಂದು 11 ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ. ಕುಪ್ಪಣ್ಣ ಪಾರ್ಕ್ನಲ್ಲಿ ಫಲ ಪುಷ್ಪ ಪ್ರದರ್ಶನ, ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಮೈದಾನದಲ್ಲಿ ಆಹಾರ ಮೇಳ, ದೊಡ್ಡಕೆರೆ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜನೆ, ವಸ್ತು ಪ್ರದರ್ಶನ ಆವರಣದಲ್ಲಿ ದಸರಾ ವಸ್ತು ಪ್ರದರ್ಶನ ಅನಾವರಣ, ಸೆನೆಟ್ ಭವನದಲ್ಲಿ ಯೋಗ ದಸರಾ, ಸಯ್ಯಾಜಿರಾವ್ ರಸ್ತೆ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರದ ಮೆರುಗು, ಜೆ ಕೆ ಮೈದಾನದಲ್ಲಿ ರೈತ ದಸರಾ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಯೋಗ ದಸರಾ, ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ, ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.

ಮೈಸೂರು ದಸರಾ ಮಹೋತ್ಸವ 2023ರ ಅಕ್ಟೋಬರ್ 24ರಂದು ಮಂಗಳವಾರ ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ ಸಂಜೆ 4.40 ರಿಂದ 5.00 ರವರೆಗೆ ಅರಮನೆ ಆವರಣದಲ್ಲಿ ವಿಜಯದಶಮಿ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ. ಇನಂತರ ಸಂಜೆ 7ರಿಂದ ಪಂಜಿತ ಕವಾಯತು ಕೂಡ ಇರಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read