ಬೆಂಗಳೂರು: ಈ ಬಾರಿ ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಕರೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ನಡೆದ ಸಭೆಯಲ್ಲಿ ಈ ಕುರಿತಾಗಿ ಚರ್ಚೆ ನಡೆಸಲಾಗಿದೆ. ರಾಜ್ಯದ ಕಲಾ ತಂಡಗಳಿಗೆ ಪ್ರದರ್ಶನ ನೀಡಲು ಆಹ್ವಾನ ನೀಡಲಾಗುವುದು. ಏರ್ ಶೋ ನಡೆಸುವ ಬಗ್ಗೆ ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ಭೂಸೇನೆ, ವಾಯು ಸೇನೆ, ನೌಕಾಪಡೆಗಳಿಂದ ಸ್ತಬ್ಧ ಚಿತ್ರ ಮತ್ತು ಕವಾಯತಿನಲ್ಲಿ ಭಾಗವಹಿಸಲು ತಂಡ ಕಳುಹಿಸುವಂತೆ ಮನವಿ ಮಾಡಲಾಗುವುದು.
ದಸರಾದಲ್ಲಿ ಟಿಕೆಟ್ ಪಡೆದವರಿಗೆ ಸೂಕ್ತ ಆಸನ ವ್ಯವಸ್ಥೆ ಕಲ್ಪಿಸಲು ಆದ್ಯತೆ ನೀಡಲು ಸೂಚನೆ ನೀಡಲಾಗಿದೆ. ವಿವಿಧ ದೇಶಗಳ ರಾಯಭಾರಿಗಳು, ಅಧಿಕಾರಿಗಳನ್ನು ಆಹ್ವಾನಿಸಲು ಸೂಚನೆ ನೀಡಲಾಗಿದ್ದು, ಮೈಸೂರು ದಸರಾದಲ್ಲಿ ಚಿತ್ರ ಸಂತೆ, ಪ್ಲೇ ಮಾರ್ಕೆಟ್, ವಿಂಟೇಜ್ ಕಾರು ರ್ಯಾಲಿ ಸೇರಿ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
ಸಿಎಂ ಡಿ.ಕೆ. ಶಿವಕುಮಾರ್ ಅವರು ನಾಡಹಬ್ಬ ಮೈಸೂರು ದಸರಾ ಆಚರಣೆಗೆ ಪೂರ್ವಭಾವಿಯಾಗಿ ಕೈಗೊಂಡಿರುವ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಕೆ.ಪಿ.ಸಿ. ಸಭಾಭವನದಲ್ಲಿ ನಡೆಸಿದರು.
ಈ ಸಂದರ್ಭದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ನಾಡಹಬ್ಬ ಮೈಸೂರು ದಸರಾ ಆಚರಣೆಗೆ ಪೂರ್ವಭಾವಿಯಾಗಿ ಕೈಗೊಂಡಿರುವ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಕೆ.ಪಿ.ಸಿ. ಸಭಾಭವನದಲ್ಲಿ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಯತೀಂದ್ರ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಅವರು ಸೇರಿದಂತೆ ವಿವಿಧ… pic.twitter.com/1wdx4lH6YE
— CM of Karnataka (@CMofKarnataka) September 3, 2026

