HomeKarnatakaಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿ ಕಂಬಳ: ಪ್ರೇಕ್ಷಕರಿಗೆ ಉಚಿತ ಪ್ರವೇಶ

ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿ ಕಂಬಳ: ಪ್ರೇಕ್ಷಕರಿಗೆ ಉಚಿತ ಪ್ರವೇಶ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಅರಮನೆ ನಗರಿ ಮೈಸೂರಿನಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿ ದಸರಾ ಮಹೋತ್ಸವದಲ್ಲಿ ಕರಾವಳಿಯ ಕಂಬಳ ಆಯೋಜಿಸಿರುವುದು ವಿಶೇಷ.

ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಕರಾವಳಿ ಭಾಗದ ಸಾಂಸ್ಕೃತಿಕ ಕ್ರೀಡೆ ಕಂಬಳ ಆಯೋಜಿಸಲಾಗಿದ್ದು, ಕಂಬಳಕ್ಕಾಗಿ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿ ಸುಮಾರು 25 ರಿಂದ 30 ಲಕ್ಷ ಜನರು ಕಂಬಳ ವೀಕ್ಷಿಸುವ ನಿರೀಕ್ಷೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂಬಳ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇರಲಿದ್ದು, ವೀಕ್ಷಕರಿಗೆ ಸುಗಮ ಅನುಭವ ನೀಡಲು ಸಮಗ್ರ ವ್ಯವಸ್ಥೆಗಳನ್ನು ಮಾಡಲಾಗಿದೆ. ಸುಮಾರು 8,000 ಜನರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದ್ದು, ಪಾಸ್‌ಗಳ ಮೂಲಕ ಪ್ರವೇಶ ನೀಡಲಾಗುವುದು. ಜೊತೆಗೆ, ಒಂದೇ ಬಾರಿಗೆ 5,000 ಜನರಿಗೆ ನಿಂತು ವೀಕ್ಷಿಸಲು ಸಹ ಅವಕಾಶವಿದೆ.

ಕಾರ್ಯಕ್ರಮದ ಸ್ಥಳದಲ್ಲಿ ಕುಟುಂಬ ಸಮೇತ ಭೇಟಿ ನೀಡುವವರಿಗೆ ಸೆಲ್ಫಿ ಮತ್ತು ಫೋಟೋ ತೆಗೆಸಿಕೊಳ್ಳಲು ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗುತ್ತಿದೆ.

ಕಂಬಳವು 48 ಗಂಟೆಗಳ ಕಾಲ ನಿರಂತರವಾಗಿ ನಡೆಯಲಿದ್ದು, ಭಾನುವಾರ ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿಗಳು ಮತ್ತು ಸಚಿವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿದೇಶಿ ಪ್ರವಾಸಿಗರಿಗೆ ಪ್ರತ್ಯೇಕ ಪಾಸ್ ಕೌಂಟರ್ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆ ಮೂಲಕ ಕಂಬಳ ಕ್ರೀಡೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡುವ ಗುರಿ ಹೊಂದಲಾಗಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರ: ನೀರಿನ ಹರಿವು 2,000 ಕ್ಯೂಸೆಕ್ಸ್‌ಗೆ ಇಳಿಸಲು CWMAಗೆ ಕರ್ನಾಟಕ ಮನವಿ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ 4,000 ಕ್ಯೂಸೆಕ್ಸ್ ನೀರು ಹರಿಸುವ ಆದೇಶ ಮರುಪರಿಶೀಲನೆಗೆ ಕರ್ನಾಟಕ ಸರ್ಕಾರ CWMAಗೆ ಮನವಿ ಮಾಡಿದೆ.

ಕಾವೇರಿ ನೀರಿನ ಹರಿವು 2,000 ಕ್ಯೂಸೆಕ್ಸ್‌ಗೆ ಇಳಿಸಲು CWMAಗೆ ರಾಜ್ಯ ಸರ್ಕಾರ ಮನವಿ ಸಲ್ಲಿದೆ. ಕಾವೇರಿ ಜಲಾಶಯಗಳಿಗೆ ಒಳಹರಿವು ತೀವ್ರವಾಗಿ ಕ್ಷೀಣಿಸಿದೆ. ಕೆಆರ್‌ಎಸ್ ಸೇರಿದಂತೆ 4 ಜಲಾಶಯಗಳಲ್ಲಿ ಲಭ್ಯವಿರುವ ನೀರು ಕೇವಲ 49 ಟಿಎಂಸಿ ಮಾತ್ರ. ಮುಂದಿನ ಜೂನ್ ವರೆಗೆ ಕುಡಿಯುವ ನೀರಿಗೆ ಕಾಯ್ದಿರಿಸುವುದು ಅನಿವಾರ್ಯವಾಗುದೆ.

ಕಣಿವೆಯ 47 ತಾಲೂಕುಗಳು ತೀವ್ರ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇಲ್ಲಿಯವರೆಗೆ ಬಿಳಿಗುಂಡ್ಲುವಿನಲ್ಲಿ 44.21 ಟಿಎಂಸಿ ನೀರಿನ ಹರಿವು ದಾಖಲಾಗಿದೆ. ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಉತ್ತಮವಾಗಿರುವ ಭರವಸೆ ಇದೆ. ಹೀಗಾಗಿ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಂದ ಗಣನೀಯ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ.

ಬಿಳಿಗುಂಡ್ಲುವಿನಲ್ಲಿ ಹರಿಸಬೇಕಾದ ನೀರಿನ ಪ್ರಮಾಣ 2,000 ಕ್ಯೂಸೆಕ್ಸ್‌ಗೆ ತಗ್ಗಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular