HomeKarnatakaಪ್ರವಾಸಿಗರಿಗೆ ಗುಡ್ ನ್ಯೂಸ್: ವಿಶ್ವವಿಖ್ಯಾತ ಮೈಸೂರು ‘ದಸರಾ ಗೋಲ್ಡ್ ಕಾರ್ಡ್’ ಖರೀದಿಗೆ ಮತ್ತೆ ಅವಕಾಶ

ಪ್ರವಾಸಿಗರಿಗೆ ಗುಡ್ ನ್ಯೂಸ್: ವಿಶ್ವವಿಖ್ಯಾತ ಮೈಸೂರು ‘ದಸರಾ ಗೋಲ್ಡ್ ಕಾರ್ಡ್’ ಖರೀದಿಗೆ ಮತ್ತೆ ಅವಕಾಶ

ಮೈಸೂರು: ಮೈಸೂರು ದಸರಾ ಜಂಬೂ ಸವಾರಿ ವೀಕ್ಷಣೆಗೆ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭಾನುವಾರ ಬೆಳಗ್ಗೆ 10 ಗಂಟೆಗೆ ಮತ್ತೆ ದಸರಾ ಗೋಲ್ಡ್ ಕಾರ್ಡ್, ಟಿಕೆಟ್ ಗಳನ್ನು ಆನ್ಲೈನ್ ಮೂಲಕ ಖರೀದಿಸಲು ಅವಕಾಶ ಕಲ್ಪಿಸಿದೆ.

mysoredasara.gov.in ವೆಬ್ಸೈಟ್ ಮೂಲಕ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಖರೀದಿಸಬಹುದು. ಗೋಲ್ಡ್ ಕಾರ್ಡ್ ಗೆ 6 ಸಾವಿರ ರೂಪಾಯಿ, ಟಿಕೆಟ್ 3000 ರೂ., 2,000 ರೂ., ಬನ್ನಿಮಂಟಪದಲ್ಲಿ ಪಂಜಿನ ಕವಾಯಿತು ವೀಕ್ಷಣೆಗೆ 500 ರೂ. ನಿಗದಿಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಟೋಬರ್ 18ರಂದು ಬೆಳಗ್ಗೆ ಆನ್ಲೈನ್ ನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಯೊಳಗೆ ಎಲ್ಲಾ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಮಾರಾಟವಾಗಿದ್ದವು. ದಸರಾ ವೀಕ್ಷಿಸಲು ಬರುವ ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಜಿಲ್ಲಾಡಳಿತ ಗೋಲ್ಡ್ ಕಾರ್ಡ್ ಸೌಲಭ್ಯ ಕಲ್ಪಿಸಿದೆ.

ಭಾನುವಾರ ಬೆಳಗ್ಗೆ 10 ಗಂಟೆಗೆ ಮತ್ತೆ ದಸರಾ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಗಳನ್ನು ಆನ್ಲೈನ್ ಮೂಲಕ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular