HomeKarnatakaBREAKING: ಈ ಬಾರಿ ದುಬಾರಿ ದಸರಾ: ಗೋಲ್ಡ್ ಕಾರ್ಡ್ ಗೆ 6500 ರೂ., ಜಂಬೂಸವಾರಿ ವೀಕ್ಷಣೆಗೆ...

BREAKING: ಈ ಬಾರಿ ದುಬಾರಿ ದಸರಾ: ಗೋಲ್ಡ್ ಕಾರ್ಡ್ ಗೆ 6500 ರೂ., ಜಂಬೂಸವಾರಿ ವೀಕ್ಷಣೆಗೆ 3500 ರೂ. ನಿಗದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆನ್ಲೈನ್ ಮೂಲಕ ದಸರಾ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.

ದಸರಾ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಐದು ದಿನಗಳ ಕಾಲ ಆನ್ಲೈನ್ ಟಿಕೆಟ್ ಮಾರಾಟ ಮಾಡಲಾಗುವುದು. ಸೆಪ್ಟೆಂಬರ್ 26 ರಿಂದ 30ರವರೆಗೆ ಟಿಕೆಟ್ ಮಾರಾಟ ಮಾಡಲಾಗುತ್ತದೆ.

ಪ್ರತಿದಿನ 1 ಸಾವಿರದಿಂದ 1500 ಗೋಲ್ಡ್ ಕಾರ್ಡ್ ಗಳನ್ನು ಮಾರಾಟ ಮಾಡಲಿದ್ದು, ದಸರಾ ಗೋಲ್ಡ್ ಕಾರ್ಡ್ ಗೆ 6500 ರೂ. ದರ ನಿಗದಿಪಡಿಸಲಾಗಿದೆ. ಗೋಲ್ಡ್ ಕಾರ್ಡ್ ನಲ್ಲಿ ಒಬ್ಬರಿಗೆ ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು, ಚಾಮುಂಡಿ ಬೆಟ್ಟ ಹಾಗೂ ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಿಸುವುದಕ್ಕೆ ಅವಕಾಶ ಇರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ 3500 ರೂ. ಟಿಕೆಟ್ ದರ ನಿಗದಿಪಡಿಸಲಾಗಿದೆ. ಅರಮನೆಯ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಿಸಬಹುದು. ಪಂಜಿನ ಕವಾಯತು ವೀಕ್ಷಣೆಗೆ ಟಿಕೆಟ್ ದರ 1,000 ರೂ. ನಿಗದಿಪಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular