HomeKarnatakaಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸಚಿವ ಡಾ. ಯತೀಂದ್ರ

ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸಚಿವ ಡಾ. ಯತೀಂದ್ರ

ಮೈಸೂರು: ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ಇರಲಿದೆ ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ವೀರನ ಹೊಸಹಳ್ಳಿಯಲ್ಲಿ ಗಜ ಪಯಣಕ್ಕೆ ಚಾಲನೆ ನೀಡಿದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಕಂಬಳ ಆಯೋಜನೆಗೆ ಸ್ಥಳ ಗುರುತಿಸಲಾಗಿದೆ. ಗುರುತು ಮಾಡಿರುವ ಸ್ಥಳದಲ್ಲಿಯೇ ಕಂಬಳ ನಡೆಯಲಿದೆ. ಮುಖ್ಯಮಂತ್ರಿಗಳು ಕೂಡ ಕಂಬಳ ನಡೆಸಲು ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಗಜ ಪಯಣ ಆರಂಭವಾಗಿದ್ದು, 25 ವರ್ಷಗಳಿಂದ ದಸರಾದಲ್ಲಿ ಭಾಗಿಯಾಗುತ್ತಿದ್ದ ಅಭಿಮನ್ಯು ಆನೆ ನಿವೃತ್ತಿಯಾಗಿದೆ. ಆರು ಬಾರಿ ಅಂಬಾರಿ ಹೊತ್ತಿದ್ದ ಅಭಿಮನ್ಯು ಆನೆಗೆ ಪೂಜೆ ಸಲ್ಲಿಸಿ ಬೀಳ್ಕೊಡುಗೆ ನೀಡಲಾಗಿದೆ. ನಿಶಾನೆ ಆನೆಯಾಗಿ ಅಭಿಮನ್ಯು ಆನೆಯನ್ನು ಕರೆತರುವ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಸಾಧ್ಯತೆಗಳನ್ನು ನೋಡಿಕೊಂಡು ಅದರ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ಅಂಬಾರಿ ಹೊರುವ ಆನೆಯನ್ನು ಇನ್ನೂ ಆಯ್ಕೆ ಮಾಡಿಲ್ಲ. ತಾಲೀಮು ನಡೆದ ಬಳಿಕ ಅದನ್ನು ತೀರ್ಮಾನಿಸಲಾಗುವುದು ಎಂದು ಸಚಿವ ಯತೀಂದ್ರ ಹೇಳಿದ್ದಾರೆ.

ಮೈಸೂರು ದಸರೆಯ ತಯಾರಿಗೆ ಗಜಪಯಣದ ಮೂಲಕ ವಿದ್ಯುಕ್ತ ಚಾಲನೆ

ಮೈಸೂರು ದಸರಾ ಸಂಭ್ರಮದ ಪ್ರಮುಖ ಆಕರ್ಷಣೆಯಾದ ನಮ್ಮ ಗಜಪಡೆಯ ದಸರಾ ಪಯಣಕ್ಕೆ ಇಂದು ವೀರನಹೊಸಹಳ್ಳಿಯಲ್ಲಿ ವಿದ್ಯುಕ್ತ ಚಾಲನೆ ನೀಡುವ ಸಂತಸದ ಜವಾಬ್ದಾರಿ ನನ್ನದಾಯಿತು.

ಗಜಪಯಣದ ಪ್ರಥಮ ಹಂತವಾಗಿ ತಮ್ಮ ವಾಸಸ್ಥಳದಿಂದ ಮೈಸೂರಿನತ್ತ ಹೊರಟ ಗಜಪಡೆಯನ್ನು ಬೀಳ್ಕೊಡುವ ಕ್ಷಣ ವಿಶೇಷವಾದ ಅನುಭವ ನೀಡಿತು.

ಚಿಕ್ಕಂದಿನಿಂದಲೂ ಮೈಸೂರು ದಸರೆಯ ವೈಭವವನ್ನು ಕಣ್ತುಂಬಿಕೊಂಡು ಬೆಳೆದ ನನಗೆ, ಇಂದು ಅದೇ ದಸರೆಯ ಸಿದ್ಧತೆಯ ಭಾಗವಾಗಿ ಗಜಪಯಣದಲ್ಲಿ ಭಾಗವಹಿಸಿದ್ದು ಹೆಮ್ಮೆ ಹಾಗೂ ಸಂತಸ ಮೂಡಿಸಿದೆ. ಕಾಡಿನಿಂದ ನಮ್ಮ ಮೈಸೂರಿನತ್ತ ಪಯಣ ಬೆಳೆಸಿರುವ ಗಜಪಡೆಯ ಎಲ್ಲಾ ಸದಸ್ಯರಿಗೆ ಹಾರ್ದಿಕ ಶುಭಾಶಯಗಳು. ಮೈಸೂರಿಗೆ ನಿಮ್ಮ ಸುರಕ್ಷಿತ ಆಗಮನವನ್ನು ಕಾತರದಿಂದ ಎದುರು ನೋಡುತ್ತಿದ್ದೇವೆ ಎಂದು ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಾದ ಅನಿಲ್ ಚಿಕ್ಕಮಾದು, ಡಿ. ರವಿಶಂಕರ್, ಹರೀಶ್ ಗೌಡ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular