HomeKarnatakaಮೈಸೂರು ದಸರಾ ಕವಿಗೋಷ್ಠಿಗೆ ಅರ್ಜಿ ಆಹ್ವಾನ

ಮೈಸೂರು ದಸರಾ ಕವಿಗೋಷ್ಠಿಗೆ ಅರ್ಜಿ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ಅಕ್ಟೋಬರ್ 5ರಿಂದ 9ರವರೆಗೆ 5 ದಿನ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಕವಿಗೋಷ್ಠಿಗಳನ್ನು ಆಯೋಜಿಸಲಾಗಿದೆ.

ಪ್ರಾದೇಶಿಕ ಕವಿಗೋಷ್ಠಿ ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಾದೇಶಿಕ ಕವಿಗೋಷ್ಠಿಗೆ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಮಡಿಕೇರಿ ಜಿಲ್ಲೆಗಳ ಕವಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಕನಿಷ್ಠ ಒಂದು ಕವನ ಸಂಕಲನ ಪ್ರಕಟಿಸಿರಬೇಕು.

ವಿಖ್ಯಾತ ಕವಿಗೋಷ್ಠಿಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಒಬ್ಬರಂತೆ ಭಾಗವಹಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರ ಕನಿಷ್ಠ ಎರಡು ಕವನ ಸಂಕಲನ ಪ್ರಕಟಿಸಿರಬೇಕು. ಕವಿತೆಗಳು ಕಡ್ಡಾಯವಾಗಿ ಕನ್ನಡದಲ್ಲಿ ಇರಬೇಕು. ಕಳೆದ ಎರಡು ವರ್ಷಗಳಿಂದ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದವರು ತಮ್ಮ ಸ್ವವಿವರ ಮತ್ತು ಕವನ ಸಂಕಲನಗಳೊಂದಿಗೆ ಅರ್ಜಿಗಳನ್ನು ದಸರಾ ಕವಿ ಗೋಷ್ಠಿ ಉಪ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕರಿಗೆ ನೇರವಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಸೆಪ್ಟೆಂಬರ್ 12ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular