ಮೈಸೂರು ದಸರಾ ಮಹೋತ್ಸವ-2023 : ಇಂದು ಗಜಪಯಣಕ್ಕೆ ಚಾಲನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಹುಣಸೂರು ತಾಲೂಕಿನ ವೀರನಹೊಸಳ್ಳಿ ಗ್ರಾಮದಲ್ಲಿ ಗಜಪಯಣಕ್ಕೆ ಚಾಲನೆ ದೊರೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಿದ್ದಾರೆ. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಗಜಪಡೆ ಹಾಗೂ ಗಜಪಡೆಯ ಸೇವಕರಿಗೆ ಜಿಲ್ಲಾಡಳಿತ 1.52 ಕೋಟಿ ರೂ. ಮೊತ್ತದ ವಿಮೆ ಸೌಲಭ್ಯ ಕಲ್ಪಿಸಿದೆ.

ಇಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮೈಸೂರು ಆನೆಗಳ ಪಟ್ಟಿ ಹಾಗೂ ಕಿರು ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ  ನಡೆಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read