HomeKarnatakaಮೈಸೂರು ದಸರಾ ಮಹೋತ್ಸವ: ಗಜಪಡೆಗಳ ಪಯಣಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಮಹೋತ್ಸವ: ಗಜಪಡೆಗಳ ಪಯಣಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ- 2026ರಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಗಜಪಯಣಕ್ಕೆ ಇಂದು ಅಧಿಕೃತ ಚಾಲನೆ ದೊರೆತಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಗಜಪಡೆಗೆ ಚಾಲನೆ ನೀಡಿದರು. ಹುಣಸೂರಿನ ವೀರನಹೊಸಳ್ಳಿಯಲ್ಲಿ ಬೆಳಿಗ್ಗೆ 10 ರಿಂದ 10.28ರ ಶುಭ ತುಲಾ ಲಗ್ನದಲ್ಲಿ ಪೂಜೆಕಾರ್ಯ ನಡೆದಿದ್ದು, ದಸರಾ ಗಜಪಡೆಗೆ ಫಲತಾಂಬೂಲ ನೀಡುವ ಮೂಲಕ ಚಾಲನೆ ನೀಡಲಾಗಿದೆ.

ಮೊದಲ ಹಂತದಲ್ಲಿ ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ, ಲಕ್ಷ್ಮೀ, ಕಾವೇರಿ ಸೇರಿ 9 ಆನೆಗಳು ಮೈಸೂರು ಅರಮನೆಯತ್ತ ಹೆಜ್ಜೆ ಹಾಕಿವಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಸರಾದಲ್ಲಿ ಭಾಗವಹಿಸುವ ಆನೆಗಳು ವೀರಹೊಸನಹಳ್ಳಿಯಿಂದ ಅರಮನೆ ತನಕ ಪಯಣ ಮಾಡುತ್ತವೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಸುಮಾರು ಆರು ಬಾರಿ ಯಶಸ್ವಿಯಾಗಿ ಹೊತ್ತಿದ್ದ ಅಭಿಮನ್ಯು ಆನೆ ಇಂದು ನಿವೃತ್ತಿ ಹೊಂದಿದೆ.

ಈ ಹಿನ್ನೆಲೆಯಲ್ಲಿ ಅಭಿಮನ್ಯು ಆನೆಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಅಭಿಮನ್ಯು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಹೊಸದಾಗಿ ಬಂದಿರುವ ಆನೆಗಳಿಗೆ ಗಜಪಯಣಕ್ಕೆ ಚಾಲನೆ ನೀಡಲಾಗಿದೆ. ಈ ಬಾರಿ ಅಂಬಾರಿಯನ್ನು ಯಾವ ಆನೆ ಹೊತ್ತುಕೊಂಡು ಸಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಗುರುತಿಸಲಾದ ಕೆಲವು ಆನೆಗಳಿಗೆ ಅರಮನೆಯಲ್ಲಿ ತರಬೇತಿ ನೀಡಿದ ನಂತರ, ಕೊನೆಯಲ್ಲಿ ಅಂಬಾರಿ ಹೊರಲು ಸೂಕ್ತವಾದ ಆನೆಯನ್ನು ಅಂತಿಮಗೊಳಿಸಲಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular