HomeKarnatakaಮೈಸೂರು: ಕಬ್ಬಿಣದ ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು

ಮೈಸೂರು: ಕಬ್ಬಿಣದ ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು

ಮೈಸೂರು: ಮೈಸೂರಿನಲ್ಲಿ ಕಬ್ಬಿಣದ ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ್ದಾನೆ, ಕುಡಿದ ಮತ್ತಿನಲ್ಲಿ ಕಬ್ಬಿಣದ ಕಂಬಿ ಬೇಲಿ ಮೇಲಿನಿಂದ ಹಾರಲು ಹೋಗಿ ದುರ್ಘಟನೆ ಸಂಭವಿಸಿದೆ. ಕಬ್ಬಿಣದ ಚೂಪಾದ ಭಾಗ ತೊಡೆ ಭಾಗಕ್ಕೆ ಚುಚ್ಚಿ ತೀವ್ರ ರಕ್ತಸ್ರಾವ ಉಂಟಾಗಿದೆ.

ಮೈಸೂರಿನ ರಾಜೀವ ನಗರದ ನಿವಾಸಿ ರವಿ(38) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೈಸೂರು ಮೃಗಾಲಯದ ಬಳಿ ಕಬ್ಬಿನ ಹಾಲು ವ್ಯಾಪಾರ ಮಾಡುತ್ತಿದ್ದ ರವಿ ಒಂದು ತಿಂಗಳಿನಿಂದ ಕುಡಿತದ ಚಟಕ್ಕೆ ದಾಸನಾಗಿದ್ದ ಎನ್ನಲಾಗಿದೆ. ಮಧ್ಯರಾತ್ರಿ ಮನೆಯಿಂದ ಹೊರ ಬಂದಿದ್ದ ರವಿ ಬೇಲಿ ಹಾರಲು ಹೋಗಿ ದುರ್ಘಟನೆ ಸಂಭವಿಸಿದೆ. ಮೈಸೂರಿನ ನಜಾರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೋಗಿಗೆ ಬೆಂಕಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು: ಬೆಂಗಳೂರಿನ ಮೆಜೆಸ್ಟಿಕ್ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಖಾಲಿ ನಿಂತಿದ್ದ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಫ್ಲಾಟ್ ಫಾರ್ಮ್ 1ರ ಬಳಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬೆಂಕಿ ತಗುಲಿದ್ದರಿಂದ ಬೋಗಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾಲ ಸೌಲಭ್ಯ

ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಅರ್ಜಿ ಸಲ್ಲಿಸಲು ಅಕ್ಟೋಬರ್ 1 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://kmcdc.karnataka.gov.in     ಅಥವಾ  ಜಿಲ್ಲಾ ನಿಗಮದ ದೂ.ಸಂ: 080-29903994, 886753779, 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೈನುಗಾರಿಕೆ ತರಬೇತಿ

ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಸೆಪ್ಟೆಂಬರ್ 8 ಮತ್ತು 9 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು  ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular