HomeKarnatakaಕರ್ನಾಟಕ ಬಜೆಟ್ 2026: ಬೆಂಗಳೂರು ಬಳಿಕ ಮೈಸೂರನ್ನು ರಾಜ್ಯದ ಎರಡನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ

ಕರ್ನಾಟಕ ಬಜೆಟ್ 2026: ಬೆಂಗಳೂರು ಬಳಿಕ ಮೈಸೂರನ್ನು ರಾಜ್ಯದ ಎರಡನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ

ಸಾಂಸ್ಕೃತಿಕ ನಗರಿ ಮೈಸೂರು ಈಗ ಹೈಟೆಕ್ ರೂಪ ಪಡೆಯಲು ಸಜ್ಜಾಗಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್‌ನಲ್ಲಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿ (IT City) ಯನ್ನಾಗಿ ಅಭಿವೃದ್ಧಿಪಡಿಸಲು ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಮೇಲಿನ ಅತಿಯಾದ ಒತ್ತಡವನ್ನು ಕಡಿಮೆ ಮಾಡಲು ಮತ್ತು ಉದ್ಯೋಗದ ವಿಕೇಂದ್ರೀಕರಣಕ್ಕೆ ಒತ್ತು ನೀಡಲು ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ.

ಬೆಂಗಳೂರಿನ ದಟ್ಟಣೆ ನಿಯಂತ್ರಣ: ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಮತ್ತು ಜನದಟ್ಟಣೆಯನ್ನು ಕಡಿಮೆ ಮಾಡಲು ಮೈಸೂರನ್ನು ಪರ್ಯಾಯ ಐಟಿ ತಾಣವನ್ನಾಗಿ ರೂಪಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರಿನ ಸಾಮರ್ಥ್ಯ: ಈಗಾಗಲೇ ಹಲವು ಐಟಿ ಕಂಪನಿಗಳನ್ನು ಹೊಂದಿರುವ ಮೈಸೂರಿನಲ್ಲಿ ಮೂಲಸೌಕರ್ಯ ವೃದ್ಧಿಸಿ, ಹೆಚ್ಚಿನ ಹೂಡಿಕೆದಾರರನ್ನು ಆಕರ್ಷಿಸುವುದು ಸರ್ಕಾರದ ಗುರಿ.

ಸ್ಥಳೀಯರಿಗೆ ಉದ್ಯೋಗ: ಮೈಸೂರನ್ನು ಐಟಿ ಹಬ್ ಮಾಡುವುದರಿಂದ ಸುತ್ತಮುತ್ತಲ ಜಿಲ್ಲೆಗಳ ಯುವಜನತೆಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular