HomeKarnatakaBIG NEWS: ಕಾಂಗ್ರೆಸ್ ಸರ್ಕಾರ ತೆಗೆಯಲು ಕೇಂದ್ರ ಸಚಿವರ ಹುನ್ನಾರ: ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಯಾರೂ...

BIG NEWS: ಕಾಂಗ್ರೆಸ್ ಸರ್ಕಾರ ತೆಗೆಯಲು ಕೇಂದ್ರ ಸಚಿವರ ಹುನ್ನಾರ: ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಯಾರೂ ಪ್ರಶ್ನಿಸುತ್ತಿಲ್ಲ: ಸಚಿವ ಬೋಸರಾಜ್ ಆಕ್ರೋಶ

ರಾಯಚೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯದ ಅಭಿವೃದ್ದಿಗಾಗಿ ಕೆಲಸ ಮಾಡುತ್ತಿಲ್ಲ. ಬರಿ ರಾಜಕೀಯ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಸಚಿವ ಎನ್.ಎಸ್.ಬೋಸರಾಜ್ ಕಿಡಿಕಾರಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಸಚಿವ ಬೋಸರಾಜ್, ಕರ್ನಾಟಕದಲ್ಲಿ ನಮ್ಮ ಸರ್ಕಾರವನ್ನು ತೆಗೆಯಲು ಪ್ಲಾನ್ ಮಾಡುತ್ತಿದ್ದಾರೆ. ಹೊಸದಾಗಿ ಅಮಿತ್ ಶಾ ಅವರಿಗೆ ದೇವೇಗೌಡರು, ಹೆಚ್.ಡಿ.ಕೆ ಮಾತು ಕೊಟ್ಟಿದ್ದಾರೆ. 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ತೆಗೆಯುವುದಾಗಿ ಮಾತುಕೊಟ್ಟಿದ್ದಾರೆ. ಅವರ ಕೆಲಸಕ್ಕೆ ಪ್ರಹ್ಲಾದ್ ಜೋಶಿ ಸಾಥ್ ನೀದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಯಾರೂ ಪ್ರಶ್ನಿಸುತ್ತಿಲ್ಲ. ರಾಜ್ಯಕ್ಕೆ ಅನುದಾನ, ಯೋಜನೆಗಳನ್ನು ಬಿಡುಗಡೆ ಮಡಿಸುವ ನಿಟ್ಟಿನಲ್ಲಿಯೂ ಕೇಂದ್ರ ಸಚಿವರಾಗಿರುವ ರಾಜ್ಯ ನಾಯಕರು ಪ್ರಯತ್ನಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular