HomeKarnatakaಶಿವಮೊಗ್ಗದಲ್ಲಿ ಅಕ್ಟೋಬರ್ 08 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಅಕ್ಟೋಬರ್ 08 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಶಿವಮೊಗ್ಗ :    ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 08 ರಂದು ಬೆಳಿಗ್ಗೆ 10 ಗಂಟೆಗೆ “ನೇರ ಸಂದರ್ಶನ’ವನ್ನು ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಇಟಾಚಿ ಕ್ಯಾಶ್ ಮ್ಯಾನೇಜ್‌ಮೆಂಟ್ ಸರ್ವಿಸ್ ಪ್ರೈ.ಲಿ., ಖಾಸಗಿ ಕಂಪನಿ ಭಾಗವಹಿಸಲಿದ್ದು, ಉದ್ಯೋಗ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.

 ದಿನಾಂಕ: 08-10-2026 ರಂದು ಬೆಳಿಗ್ಗೆ 10:00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು ಎಸ್ ಎಸ್ ಎಲ್ ಸಿ, ಪಿಯುಸಿ, ಮತ್ತು ಯಾವುದೇ ಪದವಿ ಪಡೆದಿರುವ 18 ರಿಂದ 35 ವರ್ಷ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606/9108235132 ಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

 ಜನರ ಮನೆ ಬಾಗಿಲಿಗೆ ಸೇವೆ ಒದಗಿಸುವುದು ಸರ್ಕಾರದ ಆಶಯ : ಎಸ್ ಮಧು ಬಂಗಾರಪ್ಪ

 ಸಾಗರ : ಜನರ ಅಶೋತ್ತರಗಳಿಗೆ ಪೂರಕವಾಗಿ ಸರ್ಕಾರವು ರೂಪಿಸಿ, ಅನುಷ್ಠಾನಗೊಳಿಸುವ ಜನಪರ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಬೇಕೆನ್ನುವುದು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ನೀಡುವುದು ಸರ್ಕಾರದ ಆಶಯವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಅವರು ಹೇಳಿದರು.

 ಅವರು ಇಂದು ಸಾಗರದ ಗಾಂಧಿ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸಾಗರ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವುದಲ್ಲದೆ ಗ್ರಾಮೀಣ ಜನರ ಜ್ವಲಂತ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಒದಗಿಸುವುದು ಕೂಡ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇದರಿಂದಾಗಿ ಸ್ಥಳೀಯ ಜನರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ದೊರೆತು ನೆಮ್ಮದಿಯ ಬದುಕು ಸಾಧ್ಯವಾಗಲಿದೆ ಎಂದವರು ನುಡಿದರು.

ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಜಾ ಸೇವಾ ಆಂದೋಲನ ಸಭೆಗಳು ನಡೆಯಲಿವೆ. ನಿಕಟ ಪೂರ್ವ ಮುಖ್ಯಮಂತ್ರಿಗಳಾಗಿದ್ದ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಇದೇ ರೀತಿಯ ಜನಸ್ಪಂದನ ಎಂಬ ಅಪರೂಪದ ಜನಪ್ರಿಯ ಕಾರ್ಯಕ್ರಮವನ್ನು ರೂಪಿಸಿ ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯ ಜನರಿಗೆ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲಾಗಿತ್ತು. ಪ್ರಸ್ತುತ ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ರಾಜ್ಯಮಟ್ಟದಲ್ಲಿ ಪ್ರಜಾಸೇವಾ ಎಂಬ ಇಲಾಖೆಯನ್ನು ಪ್ರತ್ಯೇಕವಾಗಿ ಸೃಷ್ಟಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸ್ವೀಕರಿಸಲಾಗುವ ಎಲ್ಲಾ ಅರ್ಜಿಗಳನ್ನು ನಿಗದಿಪಡಿಸಿದ ಕಾಲಮಿತಿಯಲ್ಲಿ ವಿಲೇವಾರಿ ಗೊಳಿಸಲಾಗುವುದು ಎಂದವರು ನುಡಿದರು.

 ವಿಶೇಷವಾಗಿ ಈ ಕಾರ್ಯಕ್ರಮದ ವ್ಯವಸ್ಥಿತ ಅನುಷ್ಠಾನದಿಂದಾಗಿ ಪ್ರಾದೇಶಿಕವಾಗಿರುವ ಜ್ವಲಂತ ಸಮಸ್ಯೆಗಳು ಸರ್ಕಾರದ ಗಮನಕ್ಕೆ ಬರುವುದಲ್ಲದೆ ಅವುಗಳಿಗೆ ಶಾಶ್ವತವಾಗಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.ಯಾವುದೇ ದೇಶದ ಉಜ್ವಲ ಭವಿಷ್ಯ ಮತ್ತು ಪ್ರಗತಿ ಆ ದೇಶದ ಮಕ್ಕಳಿಂದ ಸಾಧ್ಯವಾಗಲಿದೆ. ಅವರ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಜವಾಬ್ದಾರಿ ಹೊಂದಿರುವ ನಾನು ಶಿಕ್ಷಣ ಸಚಿವನಾಗಿ ಶಕ್ತಿ ಮೀರಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಅವರು ನುಡಿದರು.

ರಾಜ್ಯದಾದ್ಯಂತ 1250 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು 2026ರ ಡಿಸೆಂಬರ್ ಮಾಸಾಂತ್ಯದೊಳಗಾಗಿ ಉದ್ಘಾಟಿಸುವಂತೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಈ ಯೋಜನೆಗಾಗಿ ಸುಮಾರು 4300 ಕೋಟಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಒಂದೇ ಶಾಲೆಯ ಆವರಣದಲ್ಲಿ ಒಂದರಿAದ ಪದವಿಪೂರ್ವ ಶಿಕ್ಷಣದವರೆಗೆ ಎಲ್ಲರಿಗೂ ಉಚಿತವಾಗಿ ಶಿಕ್ಷಣ ದೊರೆಲಿದೆ. ಅಲ್ಲದೇ ಮೂಲಭೂತ ಸೌಲಭ್ಯಗಳ ಜೊತೆಗೆ ಅಗತ್ಯವಾಗಿರುವ ಎಲ್ಲಾ ರೀತಿಯ ಶಿಕ್ಷಕರನ್ನು ಕೂಡ ನೇಮಕಗೊಳಿಸಲಾಗುತ್ತಿದೆ. ಶಾಲೆಗೆ ಬರುವ ಮಕ್ಕಳ ಅನುಕೂಲಕ್ಕಾಗಿ ಉಚಿತ ಬಸ್ ಸಂಪರ್ಕ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮಾತನಾಡಿ, ಸರ್ಕಾರದ ಸೇವೆ ಕಚೇರಿಗಳಿಗೆ ಮಾತ್ರ ಸೀಮಿತವಾಗಿರದೆ ಸರ್ಕಾರದ ಯೋಜನೆಗಳು ಜನರಿಗೆ ತಲುಪಿ, ಜನರ ಬದುಕಿನಲ್ಲಿ ಬದಲಾವಣೆ ತರುವ ವ್ಯವಸ್ಥೆ ಆಗಬೇಕು ಎಂದರು.

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸರ್ಕಾರ ಜನರ ಸಮಸ್ಯೆಗಳಿಗೆ ಕಿವಿಯಾಗಲಿದೆ ಎಂದ ಅವರು ರಾಜ್ಯದ ವಸತಿ ರಹಿತರಿಗೆ ನಿವೇಶನ ನೀಡಿ ನೆಮ್ಮದಿಯ ಸೂರು ನಿರ್ಮಿಸಿಕೊಳ್ಳಲು ಪ್ರತಿ ಜಿಲ್ಲೆಗೆ 50000 ನಿವೇಶನಗಳನ್ನು ಸೃಜಿಸುವಂತೆ ಸೂಚನೆ ನೀಡಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಸಾಗರ ತಾಲೂಕು ಒಂದಕ್ಕೆ ಸುಮಾರು ಹತ್ತು ಸಾವಿರ ನಿವೇಶನಗಳ ಬೇಡಿಕೆ ಬರುವ ಸಾಧ್ಯತೆ ಇದೆ ಎಂದವರು ನುಡಿದರು.

ಪ್ರಜಾಸೇವಾ ಆಂದೋಲದಲ್ಲಿ ಸ್ವೀಕರಿಸಲಾಗುವ ಎಲ್ಲಾ ಅರ್ಜಿಗಳನ್ನು ಸಕಾಲಿಕವಾಗಿ ನಿಗದಿಪಡಿಸಿದ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು. ಸಾಗರ ಪಟ್ಟಣದಲ್ಲಿ ಕಳೆದ ಕೆಲವು ತಿಂಗಳುಗಳಿAದ ಈಚೆಗೆ ಹಸುಗಳ ಕಳ್ಳತನ ನಿರಂತರವಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕಡೆ ಗಮನಹರಿಸಿ ಗೋ ಕಳ್ಳರನ್ನು ಹಿಡಿದು ಶಿಕ್ಷಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.

ಇದೇ ಕಾರ್ಯಕ್ರಮದಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಅಹವಾಲು ;

* ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆಗಿಂತ ತೀರಾ ಕಡಿಮೆ ಪ್ರಮಾಣದ ಮಳೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ನಿರೀಕ್ಷಿತ ಬೆಳೆ ಬಾರದೆ ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಸರ್ಕಾರವು ಸಾಗರ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ ಘೋಷಿಸಿ ಅಗತ್ಯ ಸೌಲಭ್ಯ ಮತ್ತು ಪರಿಹಾರವನ್ನು ಒದಗಿಸುವಂತೆ ಮನವಿ ಮಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವರು ನಾಳೆ ನಡೆಯುವ ಕ್ಯಾಬಿನೆಟ್ ನಲ್ಲಿ ವಿಷಯವನ್ನು ಪ್ರಸ್ತಾಪಿಸಿ ಸಾಗರ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ ಘೋಷಿಸುವಂತೆ ಸಚಿವರನ್ನು ಒತ್ತಾಯಿಸಿದರು.

* ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಪ್ರಮುಖವಾಗಿ ಖಾತೆ ಬದಲಾವಣೆ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿ, ವಸತಿ ಸೌಲಭ್ಯ ಕಲ್ಪಿಸಿ, ರಸ್ತೆ ದುರಸ್ತಿಗೊಳಿಸಿ ಬಸ್ ಸಂಚಾರ ಕಲ್ಪಿಸಿ ಮುಂತಾದ ಅಹವಾಲುಗಳು ಸಲ್ಲಿಕೆಯಾದವು.

* 2001ರಲ್ಲಿ ಸರ್ಕಾರದಿಂದ ನಿಯಮಾನುಸಾರ ಹಕ್ಕು ಹೊಂದಿರುವ ಜಮೀನುಗಳಿಗೆ ಹಕ್ಕುಪತ್ರ ನೀಡುವಲ್ಲಿ ತಹಸೀಲ್ದಾರರು ನಿರ್ಲಕ್ಷ ವಹಿಸುತ್ತಿದ್ದಾರೆ. – ಜೆ. ಎಲ್. ರಾಜಕುಮಾರ್,

* ತಾಲೂಕಿನ ಬರೂರು-ಕೊರ್ಲಿಕೊಪ್ಪದಿಂದ ಸಾಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದೆ. ಇದರಿಂದಾಗಿ ಸಾಗರ ಪಟ್ಟಣಕ್ಕೆ ಪ್ರತಿನಿತ್ಯ ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗಿದೆ. ಕೂಡಲೇ ರಸ್ತೆ ದುರಸ್ತಿಗೊಳಿಸಿ ಬಸ್ ಸಂಪರ್ಕ ಒದಗಿಸಬೇಕು. – ಕು. ಹರ್ಷಿಕಾ, ಕಾರ್ತಿಕ್, ಬರೂರು.

* ವೈದ್ಯಾಧಿಕಾರಿ ಡಾ. ನಾಗೇಂದ್ರಪ್ಪ ಅವರ ನಿರ್ಲಕ್ಷದಿಂದಾಗಿ ಆಪರೇಷನ್ ಗೆ ಬಂದ ಮಹಿಳೆಯ ಕಿಡ್ನಿಗೆ ತೊಂದರೆ ಆಗಿದೆ. ಅಂತಹ ವೈದ್ಯರನ್ನು ಅಮಾನತ್ತುಗೊಳಿಸಬೇಕು ಹಾಗೂ ರೋಗಿಯ ಕುಟುಂಬಕ್ಕೆ ಸೂಕ್ತ ಪರಿಕಾರ ಒದಗಿಸಬೇಕು. – ರೂಪ ಶೆಟ್ಟಿ, ಸಿರ್ಸಿ.

ಈ ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಅರಣ್ಯಾಧಿಕಾರಿಗಳಾದ ಪ್ರಸನ್ನ ಪುಟ್ಟಗಾಯ ಸುದ್ದಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬಿ ಆರ್ ಜಯಂತ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular