HomeEntertainmentನನ್ನ ಹೆಸರಿನಲ್ಲಿ ಅಶ್ಲೀಲ ವಿಡಿಯೋ ವೈರಲ್: ದೆಹಲಿ ಹೈಕೋರ್ಟ್ ಮೊರೆ ಹೋದ ನಾಗ ಚೈತನ್ಯ

ನನ್ನ ಹೆಸರಿನಲ್ಲಿ ಅಶ್ಲೀಲ ವಿಡಿಯೋ ವೈರಲ್: ದೆಹಲಿ ಹೈಕೋರ್ಟ್ ಮೊರೆ ಹೋದ ನಾಗ ಚೈತನ್ಯ

ಖ್ಯಾತ ಬಹುಭಾಷಾ ನಟ ನಾಗ ಚೈತನ್ಯ ತಮ್ಮ ವ್ಯಕ್ತಿತ್ವ ಹಕ್ಕುಗಳ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ವಿವಿಧ ಆನ್‌ಲೈನ್ ವೇದಿಕೆಗಳಲ್ಲಿ ತಮ್ಮ ಹೆಸರು, ಫೋಟೋ ಮತ್ತು ಗುರುತನ್ನು ಅನುಮತಿಯಿಲ್ಲದೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಅಶ್ಲೀಲ ಕಂಟೆಂಟ್ ಮತ್ತು ಎಐ ತಂತ್ರಜ್ಞಾನದ ದುರ್ಬಳಕೆ

ವಿವಿಧ ವೆಬ್‌ಸೈಟ್‌ಗಳು ಮತ್ತು ಸಾಮಾಜಿಕ ಜಾಲತಾಣಗಳು ಕೇವಲ ವೀಕ್ಷಣೆ ಹಾಗೂ ಆರ್ಥಿಕ ಲಾಭಕ್ಕಾಗಿ ನಾಗ ಚೈತನ್ಯ ಅವರ ಹೆಸರನ್ನು ಬಳಸಿಕೊಳ್ಳುತ್ತಿವೆ ಎಂದು ಅವರ ಪರ ವಕೀಲ ವೈಭವ್ ಗಗ್ಗರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಮುಖ್ಯವಾಗಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಸೃಷ್ಟಿಸಲಾಗಿರುವ ನಕಲಿ ವಿಡಿಯೋಗಳು, ಅನಧಿಕೃತ ವ್ಯಾಪಾರ ಪ್ರಚಾರಗಳು ಹಾಗೂ ಅಶ್ಲೀಲ ಕೀವರ್ಡ್‌ಗಳೊಂದಿಗೆ ನಟನ ಹೆಸರನ್ನು ಜೋಡಿಸಿ ಅಂತರ್ಜಾಲದಲ್ಲಿ ಹರಿಬಿಡಲಾಗುತ್ತಿದೆ. ಇದು ನಟನ ಘನತೆಗೆ ತೀವ್ರ ಧಕ್ಕೆ ತರುತ್ತಿದೆ ಎಂದು ವಕೀಲರು ವಾದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರು, ಸಾರ್ವಜನಿಕ ಜೀವನದಲ್ಲಿ ಇರುವವರು ಇಂತಹ ಸಮಸ್ಯೆಗಳಿಗೆ ಹೆಚ್ಚು ತುತ್ತಾಗುತ್ತಾರೆ ನಿಜ, ಆದರೆ ಅದಕ್ಕೂ ಒಂದು ಮಿತಿ ಇರುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಮಂತಾ ವಿಚಾರದಲ್ಲಿ ಸುಳ್ಳು ಅಪಪ್ರಚಾರ

ತಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ಧವೂ ನಾಗ ಚೈತನ್ಯ ಆಕ್ರೋಶ ಹೊರಹಾಕಿದ್ದಾರೆ. ಮಾಜಿ ಪತ್ನಿ ಸಮಂತಾ ರುತ್ ಪ್ರಭು ಅವರಿಗೆ ತಾವು ದ್ರೋಹ ಮಾಡಿದ್ದೇವೆ ಮತ್ತು ಅವರ ವೃತ್ತಿಜೀವನ ಹಾಳಾಗಲು ತಾವೇ ಕಾರಣ ಎಂಬರ್ಥದಲ್ಲಿ ಬಿತ್ತರವಾಗುತ್ತಿರುವ ವಿಡಿಯೋ ಹಾಗೂ ಪೋಸ್ಟ್‌ಗಳನ್ನು ನಟನ ಕಾನೂನು ತಂಡ ನ್ಯಾಯಾಲಯದ ಗಮನಕ್ಕೆ ತಂದಿದೆ. ಇದು ಕೇವಲ ಟೀಕೆಯಲ್ಲ, ಬದಲಿಗೆ ಉದ್ದೇಶಪೂರ್ವಕವಾಗಿ ಮಾಡುತ್ತಿರುವ ತೇಜೋವಧೆ ಎಂದು ವಕೀಲರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಒಪ್ಪಿಗೆಯಿಲ್ಲದೆ ಹೆಸರು ಹಾಗೂ ಚಿತ್ರಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸದಂತೆ ಮೂರನೇ ವ್ಯಕ್ತಿಗಳಿಗೆ ನಿಷೇಧ ಹೇರಬೇಕು ಎಂದು ನಾಗ ಚೈತನ್ಯ ಮನವಿ ಮಾಡಿದ್ದಾರೆ. ಸದ್ಯ ಈ ಅರ್ಜಿಯನ್ನು ಕೈಗೆತ್ತಿಕೊಂಡಿರುವ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 30 ಕ್ಕೆ ಮುಂದೂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular